Home ಸುದ್ಧಿಗಳು ಪ್ರಾದೇಶಿಕ ಹಸಿತ್ಯಾಜ್ಯ, ಒಣ ತ್ಯಾಜ್ಯಗಳ ವೈಜ್ಞಾನಿಕ ನಿರ್ವಹಣೆ: ಮಾಹಿತಿ ಕಾರ್ಯಾಗಾರ

ಹಸಿತ್ಯಾಜ್ಯ, ಒಣ ತ್ಯಾಜ್ಯಗಳ ವೈಜ್ಞಾನಿಕ ನಿರ್ವಹಣೆ: ಮಾಹಿತಿ ಕಾರ್ಯಾಗಾರ

286
0

ಉಡುಪಿ, ಸೆ.18: ಉಡುಪಿ ನಗರಸಭೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ವ್ಯಾಪಾರಸ್ಥರಿಗೆ ಹಸಿತ್ಯಾಜ್ಯ ಮತ್ತು ಒಣ ತ್ಯಾಜ್ಯಗಳ ವೈಜ್ಞಾನಿಕ ನಿರ್ವಹಣೆ ಹಾಗೂ ಮಳೆ ನೀರು ಸಂರಕ್ಷಣೆ ಮತ್ತು ಜಲ ಮರು ಹೂರಣ ಪ್ರಾಮುಖ್ಯತೆ ಕುರಿತು ಜಾಗೃತಿ ಮಾಹಿತಿ ಕಾರ್ಯಾಗಾರವು ಶುಕ್ರವಾರ ಉಡುಪಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯಿತು. ನಗರಸಭೆ ಪೌರಾಯುಕ್ತ ರಾಯಪ್ಪ ಕಾರ್ಯಕ್ರಮ ಉದ್ಘಾಟಿಸಿ, ವ್ಯಾಪಾರಸ್ಥರಿಗೆ ಹಸಿತ್ಯಾಜ್ಯ ಮತ್ತು ಒಣ ತ್ಯಾಜ್ಯಗಳ ವೈಜ್ಞಾನಿಕ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

ಉಡುಪಿ ನಗರಸಭೆಯ ಸ್ವಚ್ಚತೆಯ ರಾಯಭಾರಿ ಜೋಸೆಫ್ ಜಿ ರೆಬೆಲ್ಲೋ ವ್ಯಾಪಾರಸ್ಥರಿಗೆ ಪ್ಲಾಸ್ಟಿಕ್‌ನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ನಿರ್ದೇಶಕಿ ಗಾಯತ್ರಿ, ಉಡುಪಿ ನಗರಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ವ್ಯಾಪಾರಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.