ಉಡುಪಿ, ಸೆ. 20: ಸ್ವಚ್ಛತಾ ಹೀ ಸೇವೆ ಆಂದೋಲನದ ಅಂಗವಾಗಿ ಜಿಲ್ಲೆಯ ಕಾಪು ತಾಲೂಕು ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಭೇಟಿ ನೀಡಿ, ತ್ಯಾಜ್ಯ ಸಂಗ್ರಹಣೆ ಹಾಗೂ ಸಮರ್ಪಕ ವಿಲೇವಾರಿ ಮಾಡುವ ಘಟಕದ ಪರಿವೀಕ್ಷಣೆ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ ಕೆ., ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.