Monday, November 25, 2024
Monday, November 25, 2024

ಉಡುಪಿ: ಸೆ. 26 ರಿಂದ ಅ. 25 ರ ವರೆಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮ

ಉಡುಪಿ: ಸೆ. 26 ರಿಂದ ಅ. 25 ರ ವರೆಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮ

Date:

ಉಡುಪಿ, ಸೆ.21: ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸೆಪ್ಟಂಬರ್ 26 ರಿಂದ ಅಕ್ಟೋಬರ್ 25 ರ ವರೆಗೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕಾಲುಬಾಯಿ ರೋಗದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕಟ್ಟೆಚ್ಚರ ವಹಿಸಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ಅವಧಿಯಲ್ಲಿ ಯಾವುದಾದರೂ ಜಾನುವಾರುಗಳಿಗೆ ಲಸಿಕೆ ನೀಡದೆ ಬಿಟ್ಟುಹೋದಲ್ಲಿ ಅಂತಹ ಜಾನುವಾರು ಮಾಲೀಕರು ಸಮೀಪದ ಪಶುವೈದ್ಯರನ್ನು ಸಂಪರ್ಕಿಸಿ ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ ಹಾಗೂ ವಿವಿಧ ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!