Tuesday, January 21, 2025
Tuesday, January 21, 2025

ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ

ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ

Date:

ಉಡುಪಿ, ಸೆ.21: ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ನಿರ್ದೇಶನದಂತೆ ಮಾಸಿಕ ಪಿಂಚಣಿ ಯೋಜನೆಗಳಾದ ವೃದ್ಯಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ವೇತನ, ಮನಸ್ಸಿನಿ ಮತ್ತು ಮೈತ್ರಿ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಸಿಕ ಪಿಂಚಣಿ ವಿತರಣೆಯನ್ನು ಖಜಾನೆ-2 ತಂತ್ರಾಂಶದ ಮೂಲಕ ಆಧಾರ್ ಆಧಾರಿತ ನೇರ ಹಣ ಸಂದಾಯ ಯೋಜನೆಯಡಿಯಲ್ಲಿ ಫಲಾನುಭವಿಗಳ ಬ್ಯಾಂಕ್ ಅಥವಾ ಅಂಚೆ ಉಳಿತಾಯ ಖಾತೆಗೆ ನೇರವಾಗಿ ಜಮ ಮಾಡುವ ವ್ಯವಸ್ಥೆಯಡಿ ತರಲು ತೀರ್ಮಾನಿಸಲಾಗಿದ್ದು, ಈ ಯೋಜನೆಯಡಿ ಎಲ್ಲಾ ಪಿಂಚಣಿದಾರರು ಪಿಂಚಣಿ ಪಡೆಯುತ್ತಿರುವ ಪಿಂಚಣಿ ಪಾವತಿ, ಖಾತೆಗೆ ಕಡ್ಡಾಯವಾಗಿ ಆಧಾರ್ ಜೋಡಣೆ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿಕೊಳ್ಳುವಂತೆ ನಿರ್ದೇಶಿಸಿರುತ್ತಾರೆ. ಎನ್.ಪಿ.ಸಿ.ಐ ಮ್ಯಾಪಿಂಗ್ ಎಂದರೆ ಬ್ಯಾಂಕ್ ಅಥವಾ ಅಂಚೆ ಉಳಿತಾಯ ಖಾತೆಯನ್ನು ಆಧಾರ್ ಸಂಖ್ಯೆಯೊಂದಿಗೆ ಸಂಯೋಜಿಸುವ ಪ್ರಕ್ರಿಯೆಯಾಗಿದೆ. ನಿರ್ದಿಷ್ಟ ಬ್ಯಾಂಕ್ ಅಥವಾ ಅಂಚೆ ಖಾತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿದ ಆಯಾ ಬ್ಯಾಂಕ್ /ಅಂಚೆ ಖಾತೆಗೆ ನೇರ ಲಾಭ ವರ್ಗಾವಣೆಗೆ ಗ್ರಾಹಕರು ಒಪ್ಪಿಗೆ ನೀಡಿ ನೇರ ಪ್ರಯೋಜನಗಳನ್ನು ಪಡೆಯುವುದಾಗಿದೆ.

ಜಿಲ್ಲೆಯಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಈವರೆಗೆ ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಮಾಡಿಕೊಳ್ಳದಿದ್ದಲ್ಲಿ ಸೆಪ್ಟಂಬರ್ 30 ರ ಒಳಗಾಗಿ ಪಿಂಚಣಿ ಪಡೆಯಲು ಬ್ಯಾಂಕ್ /ಅಂಚೆ ಖಾತೆ ಹೊಂದಿರುವ ಬ್ಯಾಂಕ್/ಅಂಚೆ ಕಚೇರಿಗೆ ಸಂಪರ್ಕಿಸಿ ತಕ್ಷಣವೇ ಇ-ಕೆವೈಸಿ [ಆಧಾರ್ ಜೋಡಣೆ] ಪ್ರಕ್ರಿಯೆಯ ಜೊತೆಗೆ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಕೊಳ್ಳಬೇಕು. ಈಗಾಗಲೇ ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆಯಾಗಿದ್ದು, ಎನ್.ಪಿ.ಸಿ.ಐ ಮ್ಯಾಪಿಂಗ್ ಆಗಿದೆಯೇ ಎಂಬ ಬಗ್ಗೆ ಸಂಬಂಧಪಟ್ಟ ಬ್ಯಾಂಕ್/ಅಂಚೆ ಕಛೇರಿಗೆ ಭೇಟಿ ನೀಡಿ ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ/ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡದಿದ್ದಲ್ಲಿ ಪ್ರಸಕ್ತ ಸಾಲಿನ ಅಕ್ಟೋಬರ್ ಮಾಹೆಯಿಂದ ಪಿಂಚಣಿ ಪಾವತಿ ಸ್ಥಗಿತಗೊಳ್ಳುವುದು. ಆದ್ಯರಿಂದ ಜಿಲ್ಲೆಯಲ್ಲಿ ಪಿಂಚಣಿ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳು ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆಯನ್ನು ಕಡ್ಡಾಯವಾಗಿ ಮಾಡುವಂತೆ ಅಪರ ಜಿಲ್ಲಾಧಿಕಾ;ರಿ ಮಮತಾ ದೇವಿ ಜಿ.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!