Sunday, October 20, 2024
Sunday, October 20, 2024

ಲಾರಿ ಮಾಲೀಕರ ಸಮಸ್ಯೆಗಳ ಸಹಿತ ವಿವಿಧ ಬೇಡಿಕೆಗಳ ಬಗ್ಗೆ ಸಾರಿಗೆ ಸಚಿವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಲಾರಿ ಮಾಲೀಕರ ಸಮಸ್ಯೆಗಳ ಸಹಿತ ವಿವಿಧ ಬೇಡಿಕೆಗಳ ಬಗ್ಗೆ ಸಾರಿಗೆ ಸಚಿವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಸೆ. 23: ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿ ಸಾಗಾಟ ಮಾಡುವ ಲಾರಿ ಟೆಂಪೋ ಮಾಲೀಕರು ಎದುರಿಸುತ್ತಿರುವ ಸಮಸ್ಯೆಗಳಾದ ರಾಜ್ಯ ಸರ್ಕಾರದ ಹೊಸ ನಿಯಮದ ಪ್ರಕಾರ ಮೆಟ್ರಿಕ್ ಟನ್ ಆಧಾರದಲ್ಲಿ ಲೈಫ್ ಟ್ಯಾಕ್ಸ್ ಪಾವತಿ, ಕಡ್ಡಾಯ ಜಿ.ಪಿ. ಎಸ್. ಅಳವಡಿಕೆಗೆ ನಿರ್ಧಾರವನ್ನು ಪುನರ್ ಪರಿಶೀಲನೆ ನಡೆಸುವಂತೆ ಹಾಗೂ ಲಾರಿ ಮಾಲೀಕರ ಸಮಸ್ಯೆ ಹಾಗೂ ಬೇಡಿಕೆಗಳ ಸಾಧಕ ಬಾಧಕಗಳ ಬಗ್ಗೆ ಸಂಘದ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸುವಂತೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಯವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರದ ಉಚಿತ ಮಹಿಳಾ ಬಸ್ ಪ್ರಯಾಣದ ಶಕ್ತಿ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ನರ್ಮ್ ಬಸ್ ಸೇವೆ ಹೆಚ್ಚಳ ಹಾಗೂ ಹೊಸ ಬಸ್ ಮಂಜೂರು ಮಾಡುವ ತನಕ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆಯನ್ನು ಮಹಿಳೆಯರು ಹೆಚ್ಚಾಗಿ ಅವಲಂಬಿಸಿರುವ ಹಿನ್ನೆಲೆಯಲ್ಲಿ ಶಕ್ತಿ ಯೋಜನೆಯನ್ನು ಖಾಸಗಿ ಬಸ್ ಗಳಿಗೂ ವಿಸ್ತರಣೆ ಹಾಗೂ ಉಡುಪಿ ಜಿಲ್ಲೆಯ ಆರ್. ಟಿ. ಓ. ಕಚೇರಿಯಲ್ಲಿ ದೈನಂದಿನ ಚಟವಟಿಕೆಗೆ ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು ತಕ್ಷಣ ಖಾಲಿಯಿರುವ ಬ್ರೇಕ್ ಇನ್ ಸ್ಪೆಕ್ಟರ್ ಹುದ್ದೆ ಸಹಿತ ಇನ್ನಿತರ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬುಲೆಟಿನ್ ವರದಿ ಇಮ್ಪ್ಯಾಕ್ಟ್; ಕಲ್ಸಂಕ ಫುಟ್ಪಾತ್ ನಲ್ಲಿದ್ದ ಕೇಬಲ್ ವಯರ್ ತೆರವು

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌...

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.)...

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್...
error: Content is protected !!