Monday, October 21, 2024
Monday, October 21, 2024

ಜನಸಾಮಾನ್ಯರ ಕೆಲಸಗಳಿಗೆ ಸ್ಪಂದಿಸುವುದು ಸರ್ಕಾರದ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್

ಜನಸಾಮಾನ್ಯರ ಕೆಲಸಗಳಿಗೆ ಸ್ಪಂದಿಸುವುದು ಸರ್ಕಾರದ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್

Date:

ಉಡುಪಿ, ಸೆ.25: ಜನಸಾಮಾನ್ಯರ ಕೆಲಸ ಕಾರ್ಯಗಳಿಗೆ ಸ್ಪಂದಿಸಿ, ಅವರುಗಳ ಆಶೋತ್ತರಗಳನ್ನು ಈಡೇರಿಸುವುದು ಸರ್ಕಾರ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಇದಕ್ಕನುಗುಣವಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ತಿಳಿಸಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜನರು ನಮ್ಮನ್ನು ನಂಬಿ ಸರ್ಕಾರ ನಡೆಸಲು ಅವಕಾಶ ನೀಡಿದ್ದಾರೆ. ಚುನಾವಣಾ ಪೂರ್ವದಲ್ಲಿ ಅವರಿಗೆ ನೀಡಿರುವ ಭರವಸೆಗಳನ್ನು ಹಂತಹಂತವಾಗಿ ನೂರು ದಿನಗಳಲ್ಲಿ ಈಡೇರಿಸುವ ಕಾರ್ಯವನ್ನು ಮಾಡುತ್ತಾ ಬಂದಿದ್ದೇವೆ. ಅದರ ಜೊತೆಯಲ್ಲಿ ಜನರ ಕುಂದು ಕೊರತೆಗಳನ್ನು ಆಲಿಸಿ, ಪರಿಹರಿಸಲು ಜನತಾ ದರ್ಶನ ಕಾರ್ಯಕ್ರಮವನ್ನು ಇಡೀ ರಾಜ್ಯದಲ್ಲಿ ಏಕಕಾಲದಲ್ಲಿ ನಡೆಸಲಾಗುತ್ತಿದೆ. ಇದರ ಭಾಗವಾಗಿ ಇಂದು ಜಿಲ್ಲಾಮಟ್ಟದಲ್ಲಿ ಆಯೋಜಿಸಿದ್ದೇವೆ. ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸ್ಪಂದಿಸಲು ಮುಂದಾಗಲಾಗುವುದು ಎಂದರು. ಸರ್ಕಾರ ಹಾಗೂ ಅಧಿಕಾರಿಗಳಿರುವುದು ಜನರ ಸಮಸ್ಯೆಗಳನ್ನು ಪರಿಹರಿಸಲು. ಇವುಗಳನ್ನು ಅರಿತು ನಾವುಗಳು ಕೆಲಸ ಮಾಡಬೇಕಿದೆ. ಜಿಲ್ಲೆಯ ಉಸ್ತುವಾರಿ ಸಚಿವೆ ಯಾಗಿರುವವರೆಗೂ ಇಲ್ಲಿನ ಜನರ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವರು ತಿಳಿಸಿದರು. ಮಾನ್ಯ ಮುಖ್ಯಮಂತ್ರಿಗಳು ಜನಸಾಮಾನ್ಯರ ಸಮಸ್ಯೆಗಳನ್ನು ಸ್ಥಳೀಯವಾಗಿ ಆಲಿಸಿ, ಅವುಗಳನ್ನು ಸ್ಥಳೀಯ ಮಟ್ಟದಲ್ಲಿ ಪರಿಹರಿಸಬೇಕೆಂಬ ಉದ್ದೇಶದಿಂದ ಮಹತ್ವಾಕಾಂಕ್ಷಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸುವುದರೊಂದಿಗೆ ಇದಕ್ಕೆ ಸ್ಪಂದಿಸಬೇಕು ಎಂದರು.

ಸಾಮಾನ್ಯವಾಗಿ ಪೊಲೀಸ್, ಅರಣ್ಯ, ಆರೋಗ್ಯ, ಕಂದಾಯ ಸೇರಿದಂತೆ ಮತ್ತಿತರ ಇಲಾಖೆಗಳಲ್ಲಿ ದಿನನಿತ್ಯ ಜನರು ಕೆಲಸಗಳನ್ನು ಅರಸಿ, ಬರುತ್ತಾರೆ. ಈ ರೀತಿ ತಮ್ಮ ಕೆಲಸಗಳಿಗಾಗಿ ಕಚೇರಿಗೆ ಬಂದಾಗ ಅವರನ್ನು ಅಲೆಯುವಂತೆ ಮಾಡುವುದು ಸರಿಯಲ್ಲ. ಅಧಿಕಾರಿಗಳು ತಮ್ಮ ಅಹಂ ಅನ್ನು ಬಿಟ್ಟು ಜನಸಾಮಾನ್ಯರ ಕಷ್ಟಗಳಿಗೆ ಹೃದಯವಂತರಾಗಿ ಸ್ಪಂದಿಸಬೇಕು ಎಂದರು. ಇಂದಿನ ಜನಸ್ಪಂದನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸಗಳನ್ನು ಅರಸಿ, 143 ಅರ್ಜಿಗಳು ಬಂದಿದ್ದು, ಇವುಗಳನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಬಗೆಹರಿಸಲಾಗುವುದು. ಕೆಲವು ಅರ್ಜಿಗಳು ಸ್ಥಳದಲ್ಲಿಯೇ ಬಗೆಹರಿಸಲು ಸಾಧ್ಯವಾಗದಿದ್ದಲ್ಲಿ ಕಾಲಮಿತಿಯೊಳಗೆ ಸ್ಪಂದಿಸಲು ಸೂಚಿಸಲಾಗುವುದು ಎಂದ ಅವರು, ಮುಂದಿನ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಈ ದಿನ ಬಂದಿರುವ ಎಲ್ಲಾ ಅರ್ಜಿಗಳ ವಿಲೇವಾರಿ ಆಗಿರುವ ಬಗ್ಗೆ ಕೂಲಂಕುಷವಾಗಿ ಮೊದಲ ಒಂದು ಗಂಟೆಯಲ್ಲಿ ಪರಿಶೀಲಿಸಿ, ಅರ್ಜಿದಾರರಿಂದ ತಮ್ಮ ಸಮಸ್ಯೆಗಳಿಗೆ ಸ್ಪಂದಿಸಿರುವ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು.

ಸಾರ್ವಜನಿಕರಿಂದ ವಿವಿಧ ಅಹವಾಲು ಅರ್ಜಿ ಸ್ವೀಕರಿಸಲು ಕೌಂಟರ್‌ಗಳನ್ನು ತೆರೆಯಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿ ಮನ್ನಾ ಜಾಗದ ಹಕ್ಕುಪತ್ರಗಳನ್ನು ವಿವಿಧ ಫಲಾನುಭವಿಗಳಿಗೆ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ವಸ್ತು ಪ್ರದರ್ಶನದ ಮಳಿಗೆಯನ್ನು ತೆರೆಯಲಾಗಿತ್ತು. ಜನತಾ ದರ್ಶನಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಅಹವಾಲು ಹೊತ್ತು ತಂದ ಸಾವಿರಾರು ಸಾರ್ವಜನಿಕರು, ಸಂಘ-ಸಂಸ್ಥೆಗಳು, ಸ್ವಯಂ-ಸೇವಕರು, ಮಹಿಳಾ ಮಂಡಳಗಳು ತಮ್ಮ ಸಮಸ್ಯೆಗಳ ಬಗೆಹರಿಸಲು ಅಹವಾಲುಗಳನ್ನು ಸಲ್ಲಿಸಿ, ಕೆಲವೊಂದು ತಕ್ಷಣದಲ್ಲಿಯೇ ಸ್ಥಳೀಯವಾಗಿ ಬಗೆಹರಿಸಲಾಯಿತು. ಕೆಲವುಗಳನ್ನು ಕಾಲಮಿತಿಯೊಳಗೆ ಬಗೆಹರಿಸಲು ಸೂಚಿಸಲಾಯಿತು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ ಸಿಇಒ ಪ್ರಸನ್ನ ಎಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್, ಕುಂದಾಪುರ ಉಪವಿಭಾಗಧಿಕಾರಿ ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು: ಚಿನ್ನಾಭರಣವಿದ್ದ ಪರ್ಸ್ ಕಳವು

ಕೊಲ್ಲೂರು, ಅ.20: ಕೇರಳದ ಸಾಯಿಪ್ರಸನ್ನ ಎಂಬವರು ದಿನಾಂಕ 18/10/2024 ರಂದು ಸಂಜೆ...

ಡಾ.ನಾ ಮೊಗಸಾಲೆಗೆ ಗೆಳೆಯರ ಬಳಗ ಕಾರ್ಕಡ ಕಾರಂತ ಪುರಸ್ಕಾರ ಪ್ರದಾನ

ಕೋಟ, ಅ.20: ಕಾರಂತರ ವ್ಯಕ್ತಿತ್ವ ಬಹು ವಿಶಿಷ್ಟವಾದದ್ದು ಅವರ ಸಾಹಿತ್ಯಿಕ ಬದುಕು...

ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

ಉಡುಪಿ, ಅ.21: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ...
error: Content is protected !!