Tuesday, November 26, 2024
Tuesday, November 26, 2024

ಉಡುಪಿ ಜಿಲ್ಲೆಯ ಸಮಸ್ಯೆಗಳಿಗೂ ಪರಿಹಾರ ಸಿಗಲಿ: ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ ಜಿಲ್ಲೆಯ ಸಮಸ್ಯೆಗಳಿಗೂ ಪರಿಹಾರ ಸಿಗಲಿ: ಯಶ್ಪಾಲ್ ಸುವರ್ಣ ಆಗ್ರಹ

Date:

ಉಡುಪಿ, ಸೆ. 26: ರಾಜ್ಯಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನದ ಮೂಲಕ ಜನರ ಸಮಸ್ಯೆಗೆ ಸ್ಪಂದಿಸಲು ಮಾಡಿರುವ ಕಾರ್ಯಕ್ರಮ ಸ್ವಾಗತಾರ್ಹವಾಗಿದ್ದು, ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಉಡುಪಿ ಜಿಲ್ಲೆಯನ್ನು ಮಾತ್ರ ನಿರಂತರವಾಗಿ ಕಡೆಗಣಿಸುತ್ತಾ ಬಜೆಟ್ ಅನುದಾನದಲ್ಲಿಯೂ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.

ಜಿಲ್ಲೆಯಲ್ಲಿ 5 ಕ್ಕೆ 5 ಬಿಜೆಪಿ ಶಾಸಕರು ಆಯ್ಕೆಗೊಂಡ ಹಿನ್ನೆಲೆಯಲ್ಲಿ ಹತಾಶೆಗೊಂಡ ರಾಜ್ಯ ಸರ್ಕಾರ ಶಾಸಕರು ಸಲ್ಲಿಸಿದ ಯಾವುದೇ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಸೇವೆ ಸಮಸ್ಯೆ, ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅನುದಾನ ಬಿಡುಗಡೆ, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಬಿಡುಗಡೆ ಮಾಡುವಲ್ಲಿ ತಾರತಮ್ಯ, ಕಂದಾಯ, ನಗರಾಭಿವೃದ್ಧಿ ಪ್ರಾಧಿಕಾರ, ನಗರಸಭೆ ಸಹಿತ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆ ಭರ್ತಿ ಮಾಡದೇ ಸಾರ್ವಜನಿಕರ ದಿನನಿತ್ಯದ ಕೆಲಸ ಕಾರ್ಯಗಳಿಗೆ ತೀರ ಅನಾನುಕೂಲತೆಯಿಂದ ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ.

ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಈ ಹಿಂದೆ ನೀಡುತ್ತಿದ್ದ ಅನುದಾನದ ಬಹುಪಾಲನ್ನು ಮೊಟಕುಗೊಳಿಸಿ, ಗ್ಯಾರಂಟಿ ಭಾಗ್ಯಗಳ ನೆಪದಲ್ಲಿ ಜಿಲ್ಲೆಯ ಅಭಿವದ್ಧಿಯನ್ನು ಸರ್ಕಾರ ಬಲಿಕೊಡಲು ಮುಂದಾಗಿದೆ. ಸರಕಾರ ಕೂಡಲೇ ಉಡುಪಿ ಜಿಲ್ಲೆಯ ಬಗೆಗಿನ ತನ್ನ ಮಲತಾಯಿ ಧೋರಣೆಯನ್ನು ತೊರೆದು, ಜಿಲ್ಲೆಯ ಸಮಸ್ಯೆಗಳಿಗೆ ಜನತಾ ದರ್ಶನದ ಮೂಲಕವಾದರೂ ಪರಿಹಾರ ಕಲ್ಪಿಸಿ, ಅಭಿವೃದ್ಧಿಗೆ ಸಹಕರಿಸಲಿ ಎಂದು ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!