ಕಾರ್ಕಳ, ಸೆ. 30: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ 23ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ 17ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭ ನಂದಳಿಕೆಯ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ರಂಗಮಂದಿರದಲ್ಲಿ ಜರಗಿತು.
ಬೆಳಿಗ್ಗೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ ಆರಂಭಗೊಂಡು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯವರಿದ ಭಜನಾ ಕಾರ್ಯಕ್ರಮ, ಗಣಹೋಮ ಪೂಜೆ, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಚೆಂಡೆ ಬಳಗದವರಿಂದ ಚೆಂಡೆ ವಾದನ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ ನಂತರ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಂತರ ಕೆದಿಂಜೆ ಟೈರ‍್ಸ್ ಅವರಿಂದ ಪಿಲಿ ನಲಿಕೆ ಕಾರ್ಯಕ್ರಮ ಜರಗಿತು. ಮಧ್ಯಾಹ್ನ ಸಾರ್ವಜನಿಕ ಮೊಸರು ಕುಡಿಕೆ ಮತ್ತು ವಿವಿಧ ಕ್ರೀಡಾ ಕಾರ್ಯಕ್ರಮಗಳು, ಸಾರ್ವಜನಿಕರಿಗೆ ಹಗ್ಗಾಜಗ್ಗಾಟ ಸ್ಪರ್ಧೆ ಜರಗಿದವು. ಸಂಜೆ ಸಂಗೀತ ರಸಮಂಜರಿ ಕಾರ್ಯಕ್ರಮ, ಸ್ಥಳೀಯ ಪ್ರತಿಭೆಗಳಿಂದ ವೈವಿಧ್ಯಮಯ ನೃತ್ಯ ಸಿಂಚನ ಕಾರ್ಯಕ್ರಮ ಜರಗಿತು.
ಧಾರ್ಮಿಕ ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ರಶ್ಮಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಡಿ.ಆರ್.ರಾಜು ಅವರು ಕಾರ್ಯಕ್ರಮ ಉದ್ಘಾಟಿಸಿ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಸ್ಥೆಯ ಶಿಸ್ತು, ಬಗ್ಗಟ್ಟು ಎಲ್ಲರಿಗೂ ಮಾದರಿ ಎಂದರು. ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಮುನಿಯಾಲು ಉದಯ ಶೆಟ್ಟಿ, ಯುವ ಉದ್ಯಮಿ ಮತ್ತು ಸಮಾಜ ಸೇವಕರಾದ ಇನ್ನಾ ದೀಪಕ್ ಕೋಟ್ಯಾನ್, ಪ್ರದೀಪ್ ಎನ್. ಆರ್. ಕಾರ್ಕಳ, ಬೆಳ್ಮಣ್ಣು ಜೇಸಿಐ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಬೋಳ ರಘುವೀರ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಎಸ್.ಎಸ್.ಎಲ್.ಸಿ. ಅಂತಿಮ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷ ವಿಠಲ ಮೂಲ್ಯ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ರಾಜೇಶ್ ಕೋಟ್ಯಾನ್, ಉದಯ ಅಂಚನ್, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ಮೊದಲಾದವರಿದ್ದರು.