ಉಡುಪಿ, ಸೆ. 30: ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲೆಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1,500 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರೂ. 25 ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ ಹಾಗೂ ವೈದ್ಯಕೀಯ ಕ್ಷೇತ್ರದ ಸೇವೆಯನ್ನು ಗುರುತಿಸಿ ಹಿರಿಯ ವೈದ್ಯರಾದ ಉಡುಪಿ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಜಿ. ಎಸ್. ಚಂದ್ರಶೇಖರ್, ಡಾ| ಟಿ. ಎಂ. ಎ. ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ| ಶಶಿಕಿರಣ್ ಉಮಾಕಾಂತ್ ರವರಿಗೆ ಸನ್ಮಾನ ಕಾರ್ಯಕ್ರಮ ಉಡುಪಿಯ ಪುರಭವನದಲ್ಲಿ ಅಕ್ಟೋಬರ್ ೨ ಸೋಮವಾರ ಬೆಳಿಗ್ಗೆ 11.00ಕ್ಕೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಎ. ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಸಮಾರಂಭವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಕೆ. ಸುವರ್ಣ, ಉದ್ಯಮಿ ಆನಂದ ಪಿ. ಸುವರ್ಣ, ಉಜ್ವಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಅಜಯ್ ಪಿ. ಶೆಟ್ಟಿ, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಸುಕನ್ಯ ಮಾರ್ಟಿಸ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.