ಬ್ರಹ್ಮಾವರ, ಅ.1: ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ಬ್ರಹ್ಮಾವರದ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಶುಭ ಹಾರೈಸಿದರು. ವಿದ್ಯಾಲಕ್ಷ್ಮೀ ಸಂಸ್ಥೆಯ ಹಳೆ ವಿದ್ಯಾರ್ಥಿಗಳಾದ ರಮ್ಯಾ, ಸೌಜನ್ಯ ಮತ್ತು ಪ್ರಭಾಕರ ತಿಂಗಳಾಯ, ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಸಂಸ್ಥಾಪಕ ಸುಬ್ರಹ್ಮಣ್ಯ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಹಾರೈಸಿದರು.
ನಿರ್ದೇಶಕಿ ಮಮತಾ, ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್, ನೋಧಕ ಬೋಧಕೇತರರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಮಧುಮಿತಾ ಸ್ವಾಗತಿಸಿ, ಉಪನ್ಯಾಸಕಿ ಅನುಪಮ ಪಿ ಭಟ್ ವಂದಿಸಿದರು. ಉಪನ್ಯಾಸಕಿ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.