Saturday, October 19, 2024
Saturday, October 19, 2024

ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಅವಕಾಶ

ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಅವಕಾಶ

Date:

ಉಡುಪಿ, ಅ.3: ಜಿಲ್ಲೆಯ ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕುಗಳನ್ನು ಸರ್ಕಾರದ ಆದೇಶದಂತೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಆಧಿನಿಯಮದ ವಿಧಿ 3(4) ರಡಿ ನೀಡಿದ ಅಧಿಕಾರದನ್ವಯ 2022-2023 ರ ಮಾಸ್ಟರ್ ಸುತ್ತೋಲೆಯ ಅಧ್ಯಾಯ 4.2.3 ರ ಅನ್ವಯ ಬರಪೀಡಿತ ತಾಲೂಕುಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ಕುಟುಂಬಕ್ಕೆ ಹೆಚ್ಚುವರಿಯಾಗಿ 50 ದಿನಗಳ ಅಂದರೆ ಒಟ್ಟು 150 ದಿನಗಳ ಉದ್ಯೋಗ ಒದಗಿಸಲು ಅವಕಾಶವಿದೆ.

ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬಹುದಾಗಿದೆ. ಯೋಜನೆಯಡಿ ಅನುಮತಿಸಿದ ಸಾರ್ವಜನಿಕ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ನಿರ್ವಹಿಸಲು ಅವಕಾಶವಿದ್ದು, ವೈಯಕ್ತಿಕ ಕಾಮಗಾರಿಗಳಲ್ಲಿ ಉದಾಹರಣೆಗೆ ಮುಖ್ಯವಾಗಿ ದನದ ಕೊಟ್ಟಿಗೆ, ಕುರಿ, ಕೋಳಿ, ಹಂದಿ ಶೆಡ್‌ಗಳು, ಎರೆಹುಳು ತೊಟ್ಟಿ, ವಸತಿ ಯೋಜನೆಯಡಿ ಮಂಜೂರಾದ ಮನೆಗಳ ನಿರ್ಮಾಣ, ಮೀನು ಒಣಗಿಸುವ ಕಣ, ಕೃಷಿ ಹೊಂಡ, ಕೃಷಿ ಬಾವಿ ಮತ್ತು ಕೃಷಿ ಜಮೀನಿಗೆ ಸಂಬಂಧಿಸಿದ ಇತರೆ ಕಾಮಾಗಾರಿಗಳು, ಇಂಗು ಗುಂಡಿ ನಿರ್ಮಾಣ ಹಾಗೂ ತೋಟಗಾರಿಕಾ ಕಾಮಗಾರಿಗಳಾದ ಅಡಿಕೆ ತೋಟ ನಿರ್ಮಾಣ, ಪೌಷ್ಠಿಕ ತೋಟ ಮತ್ತು ಮುಂತಾದ ಕಾಮಗಾರಿಗಳನ್ನು ನಿರ್ವಹಿಸಲು ಅವಕಾಶವಿರುತ್ತದೆ.

ಸಾರ್ವಜನಿಕರು ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮತ್ತು ಯೋಜನೆಯಡಿ ಕೆಲಸ ಪಡೆಯಲು ಸಮೀಪದ ಗ್ರಾಮ ಪಂಚಾಯತಿ ಕಚೇರಿಯನ್ನು ಸಂಪರ್ಕಿಸಿ, ರೈತರು ಹಾಗೂ ಸಾರ್ವಜನಿಕರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!