ಉಡುಪಿ, ಅ.3: ಕಳೆದ ವರ್ಷ 8 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಎನ್.ಎಂ.ಎಂ.ಎಸ್ ಪರೀಕ್ಷೆಗೆ ಹಾಜರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಗಳ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳು ಹೊಸದಾಗಿ ನ್ಯಾಷನಲ್ ಸ್ಕಾಲರ್‌ಶಿಪ್ ಪೋರ್ಟಲ್‌ನಲ್ಲಿ ತಮ್ಮ ಹೆಸರನ್ನು ರಿಜಿಸ್ಟರ್ ಮಾಡಿಸಿ, ನಂತರ ಹೊಸ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹಿಂದೆ ಎನ್.ಎಮ್.ಎಮ್.ಎಸ್ ಪರೀಕ್ಷೆ ಉತ್ತಿರ್ಣರಾಗಿ 10 ನೇ ತರಗತಿ ಮತ್ತು ಪಿ.ಯು.ಸಿ ಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ರಿನಿವಲ್ ಮಾಡಿಕೊಳ್ಳಬೇಕು.
ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆಯಾ ಶಾಲೆಯ ಮುಖ್ಯಸ್ಥರು, ವಲಯ ನೋಡೆಲ್ ಅಧಿಕಾರಿಗಳು, ಜಿಲ್ಲಾ ನೋಡೆಲ್ ಅಧಿಕಾರಿ ಅಥವಾ ಡಯಟ್ ಉಡುಪಿಯ ಉಪನ್ಯಾಸಕ ಹಾಗೂ ಜಿಲ್ಲಾ ನೋಡೆಲ್ ಅಧಿಕಾರಿ ಚಂದ್ರನಾಯ್ಕ್ ಮೊ.ನಂ: 9449449602 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.