Monday, January 20, 2025
Monday, January 20, 2025

ಸಂಜೀವಿನಿ ಸಮನ್ವಯ ಸಭೆ

ಸಂಜೀವಿನಿ ಸಮನ್ವಯ ಸಭೆ

Date:

ಉಡುಪಿ, ಅ.3: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ತಾಲೂಕು ಪಂಚಾಯತ್ ಬ್ರಹ್ಮಾವರ ಇವರ ಸಹಯೋಗದಲ್ಲಿ ಬ್ರಹ್ಮಾವರ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ, ತಾಲೂಕು ಮಟ್ಟದ ಒಕ್ಕೂಟ, ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಹಾಗೂ ಬ್ರಹ್ಮಾವರ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗಾಗಿ ಸಂಜೀವಿನಿ ಸಮನ್ವಯ ಸಭೆ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಂಜೀವಿನಿ ಯೋಜನೆಯ ಹಿರಿಯ ರಾಜ್ಯ ಕಾರ್ಯಕ್ರಮ ವ್ಯವಸ್ಥಾಪಕ ಎಂ.ಕೆ ಅಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಜೀವಿನಿ ಯೋಜನೆಯು ದುರ್ಬಲ ವರ್ಗದ ಜನರ ಮತ್ತು ಮಹಿಳಾ ಸಬಲೀಕರಣದ ಅತ್ಯುನ್ನತ ಯೋಜನೆಯಾಗಿದ್ದು, ಇದನ್ನು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳು ಪರಸ್ಪರ ಸಮನ್ವಯತೆಯಿಂದ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಮ್ ಯೋಜನೆಯ ಯೋಜನಾ ನಿರ್ದೇಶಕ ಪ್ರಶಾಂತ್ ವಿ ರಾವ್ ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ್ದರು. ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಇಬ್ರಾಹಿಂ ಪುರ, ಜಿಲ್ಲಾ ಪಂಚಾಯತ್ ಸಹಾಯಕ ಅಧಿಕಾರಿ ಜೇಮ್ಸ್ ಡಿ ಸಿಲ್ವಾ, ತಾಲೂಕು ಒಕ್ಕೂಟದ ಕಾರ್ಯದರ್ಶಿ ಬೇಬಿ, ಎನ್.ಆರ್.ಎಲ್.ಎಂ ವ್ಯವಸ್ಥಾಪಕ ಅವಿನಾಶ್, ಸಂಜೀವಿನಿ ತಾಲೂಕು ಅಭಿಯಾನ ನಿರ್ವಹಣಾ ಘಟಕದ ಎಲ್ಲಾ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ವ್ಯವಸ್ಥಾಪಕಿ ನವ್ಯ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!