Sunday, January 19, 2025
Sunday, January 19, 2025

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಚಿತ್ರ ಬಿಡಿಸುವ ಸ್ಪರ್ಧೆ: ಯಶ್‌ಪಾಲ್ ಎ. ಸುವರ್ಣ

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಚಿತ್ರ ಬಿಡಿಸುವ ಸ್ಪರ್ಧೆ: ಯಶ್‌ಪಾಲ್ ಎ. ಸುವರ್ಣ

Date:

ಉಡುಪಿ, ಅ.5: ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ದಿನಾಂಕ: 22-10-2023ನೇ ಆದಿತ್ಯವಾರ ಬೆಳಿಗ್ಗೆ 9.30ಕ್ಕೆ ಮೊಗವೀರ
ಭವನ ಉಚ್ಚಿಲದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಚಿತ್ರ ಬಿಡಿಸುವ ಸ್ಪರ್ಧೆಯ ಚಿತ್ರ ರಚನೆಯ ವಿಷಯವಾಗಿ ‘ನಾಡಹಬ್ಬ ದಸರಾ’ವನ್ನು ಆಯ್ಕೆ ಮಾಡಿದ್ದು, ಸ್ಪರ್ಧಿಗಳು ಈ ವಿಷಯಕ್ಕೆ ಸಂಬಂಧಿಸಿದ ಚಿತ್ರವನ್ನು ಬಿಡಿಸಬೇಕು. ಒಟ್ಟು ಐದು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಿದ್ದು ಕಿರಿಯರ ವಿಭಾಗ (1 ರಿಂದ 4ನೇ ತರಗತಿ), ಪ್ರಾಥಮಿಕ ವಿಭಾಗ (5 ರಿಂದ 7 ನೇ ತರಗತಿ), ಹೈಸ್ಕೂಲ್ ವಿಭಾಗ (8 ರಿಂದ 10ನೇ ತರಗತಿ), ಕಾಲೇಜು ವಿಭಾಗ (ಪದವಿಪೂರ್ವ ಮತ್ತು ಪದವಿ ತರಗತಿ) ಹಾಗೂ ಸಾರ್ವಜನಿಕ ವಿಭಾಗದಲ್ಲಿ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಸ್ಪರ್ಧಾಳುಗಳಿಗೆ ಡ್ರಾಯಿಂಗ್ ಶೀಟ್ ಸ್ಥಳದಲ್ಲೇ ಒದಗಿಸಲಿದ್ದು, ಉಳಿದ ಪರಿಕರಗಳನ್ನು ಅವರೇ ತರತಕ್ಕದ್ದು. ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ 3 ಸಮಾಧಾನಕರ ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಪುರಸ್ಕರಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಲು ಆನ್‌ಲೈನ್ ನೋಂದಣಿಗಾಗಿ ಹಾಗೂ ಸ್ಫರ್ಧೆಯ ವಿವರಗಳು ಮಹಾಲಕ್ಷ್ಮಿ ಬ್ಯಾಂಕಿನ ವೆಬ್‌ಸೈಟ್ http://www.mahalakshmicoopbank.com ನಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ 9972120332, 9686124769, 9964023344 ಸಂಪರ್ಕಿಸಬಹುದು. ಸಾರ್ವಜನಿಕರು ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!