Thursday, November 19, 2026
Thursday, November 19, 2026

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಸಮಾಜಮುಖಿ ಕಾರ್ಯ ಶ್ಲಾಘನೀಯ: ಮುನಿಯಾಲು ಉದಯ ಶೆಟ್ಟಿ

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಸಮಾಜಮುಖಿ ಕಾರ್ಯ ಶ್ಲಾಘನೀಯ: ಮುನಿಯಾಲು ಉದಯ ಶೆಟ್ಟಿ

Date:

ಉಡುಪಿ, ಅ.7: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ೨೩ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಸಮಾರಂಭವು ನಂದಳಿಕೆಯ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ರಂಗಮಂದಿರದಲ್ಲಿ ನಡೆಯಿತು. ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ರಶ್ಮಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಡಿ.ಆರ್.ರಾಜು ಅವರು ಕಾರ್ಯಕ್ರಮ ಉದ್ಘಾಟಿಸಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಸ್ಥೆಯ ಶಿಸ್ತು, ಬಗ್ಗಟ್ಟು ಎಲ್ಲರಿಗೂ ಮಾದರಿ ಎಂದರು. ಸಮಾರಂಭದಲ್ಲಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಮುನಿಯಾಲು ಉದಯ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಪರಿಸರದ ಜನರ ಮನಗೆದ್ದ ಹೆಮ್ಮೆಯ ಸಂಸ್ಥೆ ಎಂದರು. ವೇದಿಕೆಯಲ್ಲಿ ಯುವ ಉದ್ಯಮಿ ಮತ್ತು ಸಮಾಜ ಸೇವಕರಾದ ಇನ್ನಾ ದೀಪಕ್ ಕೋಟ್ಯಾನ್, ಪ್ರದೀಪ್ ಎನ್. ಆರ್. ಕಾರ್ಕಳ, ಬೆಳ್ಮಣ್ಣು ಜೇಸಿಐ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಬೋಳ ರಘುವೀರ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಎಸ್.ಎಸ್.ಎಲ್.ಸಿ. ಅಂತಿಮ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ
ನಡೆಸಲಾಯಿತು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷ ವಿಠಲ ಮೂಲ್ಯ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ರಾಜೇಶ್ ಕೋಟ್ಯಾನ್, ಉದಯ ಅಂಚನ್, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...

‘ಋತು ತಾರೆ’ ವಿನೂತನ ಕಾರ್ಯಕ್ರಮ

ಬೆಂಗಳೂರು, ನ.೧೯: ಮಹಿಳೆಯರ ಮಧ್ಯವಯಸ್ಸಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸೂಕ್ತ...

ಬಂಟ್ವಾಳ: ಹೊಂಡ-ಗುಂಡಿಗಳ ವರದಿ ಬಗ್ಗೆ ಸಿಎಂ ಕಛೇರಿ ಸ್ಪಂದನೆ

ಬಂಟ್ವಾಳ, ನ.19: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲಕ ಹಾದುಹೋಗುವ...

ಮುರಳಿ ಕಡೆಕಾರ್ ಇವರಿಗೆ ಶಾರದಾಕೃಷ್ಣ ಪ್ರಶಸ್ತಿ-2027

ಉಡುಪಿ, ನ.18: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ...
error: Content is protected !!