Tuesday, February 25, 2025
Tuesday, February 25, 2025

ಪರಶುರಾಮ ಥೀಂ ಪಾರ್ಕ್: ನವೆಂಬರ್ ತಿಂಗಳ ಅಂತ್ಯದವರೆಗೆ ಪ್ರವಾಸಿಗರ ಭೇಟಿ ನಿಷೇಧ

ಪರಶುರಾಮ ಥೀಂ ಪಾರ್ಕ್: ನವೆಂಬರ್ ತಿಂಗಳ ಅಂತ್ಯದವರೆಗೆ ಪ್ರವಾಸಿಗರ ಭೇಟಿ ನಿಷೇಧ

Date:

ಉಡುಪಿ, ಅ. 7: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕ್ 27 ಜನವರಿ 2023 ರಂದು ಉದ್ಘಾಟನೆಗೊಂಡು ಪ್ರವಾಸಿಗರ ವೀಕ್ಷಣೆಗೆ ತಾತ್ಕಾಲಿಕವಗಿ ಅನುಕೂಲ ಕಲ್ಪಿಸಲಾಗಿತ್ತು. ಸದ್ರಿ ಥೀಂ ಪಾರ್ಕ್ ನ ಕಾಮಗಾರಿಯಲ್ಲಿ ಪರಶುರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ, ಮೂರ್ತಿಯ ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಸೆಪ್ಟೆಂಬರ್ 2023 ರವರೆಗೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿತ್ತು. ದಿನಾಂಕ 9-10-2023 ರಿಂದ ನವೆಂಬರ್ ತಿಂಗಳ ಅಂತ್ಯದವರೆಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಕಾಲಾವಕಾಶ ಬೇಕಾಗಿರುವುದಾಗಿ ನಿರ್ಮಿತಿ ಕೇಂದ್ರದವರು ದಿನಾಂಕ 7-10-2023 ರಂದು ಕೋರಿರುತ್ತಾರೆ. ಆದ್ದರಿಂದ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶದಿಂದ ದಿನಾಂಕ 9-10-2023 ರಿಂದ ನವೆಂಬರ್ ತಿಂಗಳ ಅಂತ್ಯದವರೆಗೆ ಯಾವುದೇ ಸಾರ್ವಜನಿಕರ ಹಾಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ ಎಂದು ಕಾರ್ಕಳ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!