Sunday, January 19, 2025
Sunday, January 19, 2025

ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ: ಅಸಂಘಟಿತ ಕಾರ್ಮಿಕರಿಂದ ಅರ್ಜಿ ಆಹ್ವಾನ

ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ: ಅಸಂಘಟಿತ ಕಾರ್ಮಿಕರಿಂದ ಅರ್ಜಿ ಆಹ್ವಾನ

Date:

ಉಡುಪಿ, ಅ.7: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಲಾಗುತ್ತಿದ್ದು, 2022 ರ ಮಾರ್ಚ್ 31 ರ ಒಳಗೆ ನೋಂದಣಿಯಾಗಿ ಮತ್ತು ಸದರಿ ದಿನಾಂಕದೊಳಗೆ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ 2 ಲಕ್ಷ ರೂ. ಗಳ ಅಪಘಾತ ಪರಿಹಾರವನ್ನು ಒದಗಿಸಲಾಗುತ್ತಿದ್ದು, ಅರ್ಹ ಅಸಂಘಟಿತ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಪಘಾತದಿಂದ ಮರಣ ಹೊಂದಿದ್ದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆ, ಯು.ಎ.ಎನ್ ಕಾರ್ಡ್ (ಇ-ಶ್ರಮ್ ಕಾರ್ಡ್)/ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್‌ಐಆರ್/ಪಂಚನಾಮವನ್ನು ಹಾಗೂ ಅಪಘಾತದಿಂದ ಅಂಗವೈಕಲ್ಯ ಹೊಂದಿದ್ದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆ, ಯು.ಎ.ಎನ್ ಕಾರ್ಡ್(ಇ-ಶ್ರಮ್ ಕಾರ್ಡ್)/ಸಂಖ್ಯೆ, ಅಪಘಾತದಿಂದ ಉಂಟಾದ ಅಂಗವೈಕಲ್ಯವನ್ನು ಸೂಚಿಸುವ ಡಿಸ್ಚಾರ್ಜ್ ಸಾರಾಂಶವನ್ನು ಒಳಗೊಂಡಿರುವ ಆಸ್ಪತ್ರೆಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಛೇರಿ, ಉಡುಪಿ ಉಪ ವಿಭಾಗ, ಎ ಬ್ಲಾಕ್, ಮೊದಲನೇ ಮಹಡಿ, ಕೊಠಡಿ ಸಂಖ್ಯೆ:201, ರಜತಾದ್ರಿ, ಮಣಿಪಾಲ, ಉಡುಪಿ ಅನ್ನು ಸಂಪರ್ಕಿಸಿ, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್.ಬಿ.ಆರ್ ಪ್ರಕಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!