Sunday, January 19, 2025
Sunday, January 19, 2025

‘ವಿಕಸನ’ ರಾಜ್ಯಮಟ್ಟದ ಉಚಿತ ರಜಾ ಶಿಬಿರ ಉದ್ಘಾಟನೆ

‘ವಿಕಸನ’ ರಾಜ್ಯಮಟ್ಟದ ಉಚಿತ ರಜಾ ಶಿಬಿರ ಉದ್ಘಾಟನೆ

Date:

ಕಟಪಾಡಿ, ಅ.9: ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸಿದ್ಧಾಂಥ್ ಫೌಂಡೇಶನ್ ನಡೆಸುವ ರಾಜ್ಯಮಟ್ಟದ ವಿಕಸನ ಶಿಬಿರದ ಉದ್ಘಾಟನೆಯು ಸೋಮವಾರ ಕಟಪಾಡಿಯ ಎಸ್.ವಿ.ಎಸ್ ಸಭಾಭವನದಲ್ಲಿ ನಡೆಯಿತು. ಸಿದ್ಧಾಂಥ್ ಫೌಂಡೇಶನ್ ನ ಟ್ರಸ್ಟಿ ನಮಿತಾ ಜಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ದೇವೇಂದ್ರ ನಾಯಕ್ ಹಾಗೂ ತ್ರಿಶಾ ವಿದ್ಯಾ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ಡಾ.ಅನಂತ ಪೈ, ಶಿಬಿರ ಸಂಚಾಲಕ ಧೀರಜ್ ಬೆಳ್ಳಾರೆ ಉಪಸ್ಥಿತರಿದ್ದರು.

ರಾಜ್ಯಮಟ್ಟದಲ್ಲಿ ನಡೆಯುವ ಈ ಶಿಬಿರದಲ್ಲಿ ಹತ್ತನೇ ತರಗತಿಯ ಪರೀಕ್ಷೆ ಎದುರಿಸುವ ಕ್ರಮಗಳು, ಹಾಡು, ನಾಟಕ, ಚಿತ್ರಕಲೆ ಮುಂತಾದ ಕಲೆಗಳು, ಕೈಗಾರಿಕಾ ಭೇಟಿ, ಚಾರಣ ಹಾಗೂ ಇನ್ನಿತರ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಕಾರಣವಾಗುವ ಚಟುವಟಿಕೆಗಳು ನಡೆಯಲಿದೆ ಎಂದು ಶಿಬಿರ ಸಂಚಾಲಕರು ತಿಳಿಸಿದರು. ವಿದ್ಯಾರ್ಥಿನಿ ಸಮೀಕ್ಷಾ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!