Monday, January 20, 2025
Monday, January 20, 2025

ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ

ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ

Date:

ಉಡುಪಿ, ಅ.10: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಉಡುಪಿ ವತಿಯಿಂದ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಮಣಿಪಾಲ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು.

18 ರಿಂದ 45 ವರ್ಷದೊಳಗಿನ, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಆಧಾರ್ ಕಾರ್ಡ್, ಭಾವಚಿತ್ರ, ರೇಶನ್ ಕಾರ್ಡ್, ಆರ್.ಡಿ. ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರದ ಪ್ರತಿಯೊಂದಿಗೆ ತರಬೇತಿಯಲ್ಲಿ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಿಡಾಕ್ ಕಛೇರಿ, ಒಂದನೇ ಮಹಡಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಅಲೆವೂರು ರೋಡ್, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ : 9844700937 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!