Monday, November 25, 2024
Monday, November 25, 2024

ಸಾರ್ವಜನಿಕರ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಸಾರ್ವಜನಿಕರ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Date:

ಉಡುಪಿ, ಅ.12: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಸೂಕ್ತ ಸ್ಥಳವನ್ನು ಗುರುತಿಸಿ, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿದರು. ಅವರು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಮೊದಲು ನಿಯೋಜಿಸಲಾದ ಅಧಿಕಾರಿಗಳು ಮಳಿಗೆ ತೆರೆಯುವ ಪ್ರದೇಶಗಳನ್ನು ಖುದ್ದು ಪರಿಶೀಲನೆ ನಡೆಸಬೇಕು. ಅಂಗಡಿ ಮುಂಗಟ್ಟುಗಳ ಸಮೀಪದಲ್ಲಿ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಸಂಚಾರ ವ್ಯವಸ್ಥೆಗೆ ಸಮಸ್ಯೆಯಾಗುವುದು ಕಂಡು ಬಂದಲ್ಲಿ ಪಟಾಕಿ ಮಳಿಗೆ ತೆರೆಯಲು ಅನುಮತಿ ನೀಡಬಾರದು ಎಂದರು.

ಕಾರ್ಕಳ ಹಾಗೂ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಈ ಹಿಂದಿನಂತೆ ಸಮಿತಿಯನ್ನು ರಚಿಸಿ, ಚೀಟಿ ಎತ್ತುವ ಮೂಲಕ ಸ್ಥಳ ಹಂಚಿಕೆ ಮಾಡುವಂತೆ ತಿಳಿಸಿದ ಅವರು, ಉಡುಪಿ ನಗರಸಭಾ ವ್ಯಾಪ್ತಿಯ ಮಲ್ಪೆ, ಸಂತೆಕಟ್ಟೆ, ಬೀಡಿನಗುಡ್ಡೆ, ಎಂ.ಜಿ.ಎಂ, ಮಣಿಪಾಲ ಹಾಗೂ ಅಂಬಲಪಾಡಿ ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯುವಲ್ಲಿ, ಸಂಚಾರ ವ್ಯವಸ್ಥೆಗೆ ತೊಂದರೆಯಾಗದಂತೆ ವಾಹನ ನಿಲುಗಡೆಗೆ ಅವಕಾಶವಿರುವ, ಜನವಸತಿ ಕಡಿಮೆ ಇರುವ ಪ್ರದೇಶದಲ್ಲಿ ನಿಯೋಜಿಸಲಾದ ಅಧಿಕಾರಿಗಳು ಸ್ಥಳ ಗುರುತಿಸಿ, ವ್ಯಾಪಾರ ನಡೆಸುವ ವ್ಯಕ್ತಿಗಳಿಗೆ ಹಂಚಿಕೆ ಮಾಡುವಂತೆ ತಿಳಿಸಿದರು. ಪರವಾನಿಗೆ ಕೋರಿ ಅಕ್ಟೋಬರ್ 16 ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಂಬಂಧಪಟ್ಟ ಇಲಾಖೆಗಳು ವರದಿಗಳನ್ನು ಶೀಘ್ರ ಪಡೆದು ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಎ.ಎಸ್.ಪಿ ಸಿದ್ಧಲಿಂಗಪ್ಪ, ನಗರಸಭೆ ಪೌರಾಯುಕ್ತ ರಾಯಪ್ಪ, ತಾಲೂಕು ತಹಶೀಲ್ದಾರ್‌ಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!