Monday, February 24, 2025
Monday, February 24, 2025

ಡೆಂಗ್ಯೂ, ಮಲೇರಿಯಾ ನಿಯಂತ್ರಣ ಕುರಿತು ಅರಿವು

ಡೆಂಗ್ಯೂ, ಮಲೇರಿಯಾ ನಿಯಂತ್ರಣ ಕುರಿತು ಅರಿವು

Date:

ಉಡುಪಿ, ಅ.13: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗ ನಿಯಂತ್ರಣ ಕಾರ್ಯಕ್ರಮ ಹಾಗೂ ಕಸ್ತೂರ್ಬಾ ಮೆಡಿಕಲ್ ಕಾಲೇಜು ಮಣಿಪಾಲ ಸಮುದಾಯ ಆರೋಗ್ಯ ವಿಭಾಗ, ಇವರ ಸಹಯೋಗದೊಂದಿಗೆ ವೈದ್ಯಕೀಯ ವಿದ್ಯಾರ್ಥಿಗಳು, ವಿಭಾಗದ ಸಿಬ್ಬಂದಿಗಳು, ಉಡುಪಿ ಹಾಗೂ ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮನೆಗಳು ಹಾಗೂ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ, ಡೆಂಗ್ಯೂ ಹಾಗೂ ಮಲೇರಿಯಾ ರೋಗಗಳ ನಿಯಂತ್ರಣಗಳ ಬಗ್ಗೆ ಅರಿವು ಮೂಡಿಸಿದರು. ಈ ಪ್ರದೇಶಗಳಲ್ಲಿ ಸೊಳ್ಳೆಗಳ ಲಾರ್ವಾ ಸಮೀಕ್ಷೆ ನಡೆಸಿ, ಮನೆಗಳ ಸಮೀಪದಲ್ಲಿ ನಿಂತ ನೀರಿನಲ್ಲಿ ಸೊಳ್ಳೆ ಮರಿಗಳು ಬೆಳೆಯುವುದನ್ನು ತಡೆಯುವ ಹಾಗೂ ರೋಗ ನಿಯಂತ್ರಣ ಕುರಿತು ಅಲ್ಲಿನ ಜನರಿಗೆ ಮಾಹಿತಿ ನೀಡಲಾಗುತ್ತಿದೆ.

ಉಡುಪಿ ನಗರ ಪ್ರದೇಶದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಆರೋಗ್ಯ ಕೇಂದ್ರಗಳ ಸಿಬ್ಬಂದಿಯೊಂದಿಗೆ, ಮನೆಗಳ ಹತ್ತಿರ ತ್ಯಾಜಿಸಿದ ಪ್ಲಾಸ್ಟಿಕ್ ಬಾಟಲಿಗಳು, ಕಪ್‌ಗಳು, ಟಯರ್‌ಗಳು ಇತರೆ ಯಾವುದೇ ವಸ್ತುಗಳಲ್ಲಿ ಒಂದು ಅಥವಾ ಎರಡು ಚಮಚಗಳಷ್ಟು ನೀರು ಸಹ 5-6 ದಿನ ನಿಲ್ಲುವಂತಿದ್ದರೆ ಅಲ್ಲಿ ಬೆಳೆಯುತ್ತಿರುವ ಸೊಳ್ಳೆ ಮರಿಗಳನ್ನು (ಲಾರ್ವಾ) ಪ್ರತ್ಯಕ್ಷವಾಗಿ ಮನೆ ಮಂದಿಗೆ ತೋರಿಸಿ, ಸೊಳ್ಳೆಗಳ ನಿಯಂತ್ರಣ ಮಾಡುವ ಬಗ್ಗೆ, ಡೆಂಗ್ಯೂ ಹೆಚ್ಚಿರುವ ಹಾಗೂ ಹೆಚ್ಚುತ್ತಿರುವ ಪ್ರದೇಶಗಳಲ್ಲಿ ಮಾಹಿತಿ ಹಾಗೂ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಡೆಂಗ್ಯೂ ವೈರಸ್ ಹರಡುವ ಈಡಿಸ್ ಸೊಳ್ಳೆಗಳು ಮನೆಯ ಸುತ್ತ ಸುಮಾರು 500 ಮೀಟರ್ ವ್ಯಾಪ್ತಿಯಲ್ಲಿಯೇ ಹುಟ್ಟಿ ಬೆಳೆದು ರೋಗವನ್ನು ಹರಡುವುದರಿಂದ, ಪ್ರತಿಯೊಬ್ಬರು ಮನೆಯೊಳಗೆ ಹಾಗೂ ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಂಡರೆ ರೋಗ ಹರಡುವುದನ್ನು ನಿಯಂತ್ರಿಸಬಹುದೆಂದು ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ಅಶ್ವಿನಿ ಕುಮಾರ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಮಳೆ ನಿಂತ ಮೇಲೆ ಅಲ್ಲಲ್ಲಿ ನಿಂತಿರುವ ನೀರಿನಲ್ಲಿ ಸೊಳ್ಳೆಗಳು ಕ್ಷಿಪ್ರವಾಗಿ ಬೆಳೆದು ಡೆಂಗ್ಯೂ ರೋಗ ಹರಡುತ್ತಿದ್ದು, ಇದರ ನಿಯಂತ್ರಣಕ್ಕೆ ವೈದ್ಯಕೀಯ ಕಾಲೇಜು ಹಾಗೂ ಇತರ ಸಂಘ-ಸಂಸ್ಥೆಗಳು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವಂತೆ ಜಿಲ್ಲಾ ರೋಗವಾಹಕ ಆಶ್ರಿತ ರೋಗ ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಡಾ. ಪ್ರಶಾಂತ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.24: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.24: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...
error: Content is protected !!