Sunday, January 19, 2025
Sunday, January 19, 2025

ಇಸ್ರೇಲ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಯಶ್ಪಾಲ್ ಸುವರ್ಣ

ಇಸ್ರೇಲ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಯಶ್ಪಾಲ್ ಸುವರ್ಣ

Date:

ಉಡುಪಿ, ಅ.13: ಇಸ್ರೇಲ್ ಹಮಾಸ್ ಉಗ್ರರ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಇಸ್ರೇಲ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಆಪರೇಶನ್ ಅಜಯ್ ಮೂಲಕ ಭಾರತೀಯರನ್ನು ತಾಯ್ನಾಡಿಗೆ ಕರೆತರುತ್ತಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋ ರವರನ್ನು ಶಾಸಕ ಯಶ್ಪಾಲ್ ಸುವರ್ಣ ಭೇಟಿ ಮಾಡಿ ಮಾತುಕತೆ ನಡೆಸಿದರು.

ಕರಾವಳಿ ಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತ ಸಮುದಾಯದವರಾಗಿದ್ದಾರೆ. ಈಗಾಗಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿದೇಶಾಂಗ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದರು. ಉಡುಪಿ ಶಾಸಕರ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಿದ್ದು, ದೆಹಲಿಯ ರಾಯಭಾರಿ ಕಚೇರಿಯ ಮೂಲಕ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸಹಕಾರ ನೀಡುತ್ತಿರುವ ಬಗ್ಗೆ ಧರ್ಮಾಧ್ಯಕ್ಷರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಧರ್ಮಗುರುಗಳಾದ ಚಾರ್ಲ್ಸ್ ಮಿನೇಜಸ್, ಸಮುದಾಯದ ಪ್ರಮುಖರಾದ ರಾಜೇಶ್, ಆಲ್ವಿನ್ ಡಿಸೋಜ, ಡೆನಿಸ್ ಮಸ್ಕರೇನಸ್, ಶೆರ್ಲಿನ್, ನಗರ ಬಿಜೆಪಿ ಕಾರ್ಯದರ್ಶಿ ದಿನೇಶ್ ಅಮೀನ್, ಮಾಜಿ ನಗರಸಭಾ ಸದಸ್ಯರಾದ ಪ್ರಶಾಂತ್ ಭಟ್, ಅರುಣಾ ಪೂಜಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!