Saturday, January 18, 2025
Saturday, January 18, 2025

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಕುರಿತು ಅರಿವು

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಕುರಿತು ಅರಿವು

Date:

ಉಡುಪಿ, ಅ.19: ಐ.ಇ.ಸಿ ಎಸ್.ಬಿ.ಸಿ.ಸಿ ಕಾರ್ಯಕ್ರಮದಡಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಎನ್.ಎಸ್.ಎಸ್, ಎನ್.ಸಿ.ಸಿ, ರೇಂರ‍್ಸ್, ರೋವರ್ಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರತಿನಿಧಿಗಳಿಗೆ ಅರಿವು ಕಾರ್ಯಗಾರ ಕಾರ್ಕಳದ ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಡಾ. ಅರುಣ ಕಾರ್ಯಕ್ರಮ ಉದ್ಘಾಟಿಸಿ, ಎನ್.ಸಿ.ಸಿ, ಎನ್.ಎಸ್.ಎಸ್, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಿದರೆ ಅವುಗಳನ್ನು ಸಮುದಾಯಕ್ಕೆ ತಲುಪಿಸುವ ಜವಾಬ್ದಾರಿ ನಿಭಾಯಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕು ಎಂದರು. ಪ್ರಸ್ತುತ ಇರುವ ಮಾನಸಿಕ ಆರೋಗ್ಯದಂತಹ ಗಂಭೀರ ಸಮಸ್ಯೆಗಳು ಹಾಗೂ ಅದಕ್ಕೆ ಪರಿಹಾರಗಳ ಬಗ್ಗೆ ತಿಳಿಸಿದರು.

ಆರೋಗ್ಯ ಶಿಕ್ಷಣಾಧಿಕಾರಿಗಳು ಶಶಿಧರ್, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ, ಆರೋಗ್ಯ ಮಿತ್ರ ಚೇತನ್ ಪ್ರಭು ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಚಂದ್ರಾವತಿ, ರೇಂಜರ್ ಪ್ರತಿನಿದಿ ಸೌಮ್ಯ, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಎನ್.ಎಸ್.ಎಸ್ ಅಧಿಕಾರಿ ಪ್ರಸನ್ನ ಸ್ವಾಗತಿಸಿ, ಸಂಧ್ಯಾ ಭಂಡಾರಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!