Sunday, January 19, 2025
Sunday, January 19, 2025

ಉಡುಪಿ, ದ.ಕ ಜಿಲ್ಲೆಯಲ್ಲಿ 1400 ಕಿಂಡಿ ಅಣೆಕಟ್ಟು ನಿರ್ಮಾಣ: ಸಚಿವ ಮಾಧುಸ್ವಾಮಿ

ಉಡುಪಿ, ದ.ಕ ಜಿಲ್ಲೆಯಲ್ಲಿ 1400 ಕಿಂಡಿ ಅಣೆಕಟ್ಟು ನಿರ್ಮಾಣ: ಸಚಿವ ಮಾಧುಸ್ವಾಮಿ

Date:

ಉಡುಪಿ: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 1400 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲು ಸ್ಥಳಗಳನ್ನು ಗುರುತಿಸಲಾಗಿದ್ದು ಈ ವರ್ಷ ಇದಕ್ಕಾಗಿ 500 ಕೋಟಿ ರೂ ಗಳನ್ನು ಬಿಡುಗಡೆ ಮಾಡಿ ಕಾರ್ಯಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ರಾಜ್ಯದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದರು.

ಅವರು ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 560 ಲಕ್ಷ ರೂ ವೆಚ್ಚದಲ್ಲಿ 4 ಕಿಂಡಿ ಅಣೆಕಟ್ಟುಗಳನ್ನು ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳಲ್ಲಿ ಹರಿದು ಸಮುದ್ರ ಸೇರುವ ನೀರನ್ನು ತಡೆದು ಕೃಷಿ, ಕುಡಿಯುವ ನೀರಿನ ಉದ್ದೇಶಕ್ಕೆ ಬಳಸಲು ಅನುಕೂಲವಾಗುವಂತೆ ಪಶ್ಚಿಮ ವಾಹಿನಿ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಿದ್ದು, 1400 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ.

ಇದರಿಂದ ಈ ಭಾಗದಲ್ಲಿ ಅಂರ್ತಜಲ ವೃದ್ಧಿಯ ಜೊತೆಗೆ ಮಣ್ಣಿನ ಫಲವತ್ತತೆ ವೃದ್ಧಿ ಸಹ ಸಾಧ್ಯವಾಗಲಿದೆ. ರಾಜ್ಯದಲ್ಲಿ ನೀರು ಹರಿಯುವ ಹಳ್ಳಗಳಲ್ಲಿ ಶೇಖರಣೆಯಾಗುವ ಹೊಳು ತೆಗೆಯಲೂ ಸಹ ಯೋಜನೆ ರೂಪಿಸಲಾಗುವುದು.

ಈ ಭಾಗದ ಡ್ರೀಮ್ಡ್ ಅರಣ್ಯ ಸಮಸ್ಯೆಗೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯದಲ್ಲಿ 7.70 ಲಕ್ಷ ಹೆಕ್ಟೇರ್ ಭೂಮಿಯನ್ನು ಡ್ರೀಮ್ಡ್ ವ್ಯಾಪ್ತಿಯಿಂದ ಕೈಬಿಡುವಂತೆ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ. ಈ ಭೂಮಿಯನ್ನು ಅರ್ಹ ಭೂ ರಹಿತರಿಗೆ ನೀಡಲಾಗುವುದು.

ಈಗಾಗಲೇ ಅರಣ್ಯ ವ್ಯಾಪ್ತಿಯಲ್ಲಿನ ಸಣ್ಣ ಹಿಡುವಳಿದಾರರು ಮತ್ತು ಮನೆ ಕಟ್ಟಿಕೊಂಡಿರುವವರು ಎದುರಿಸುತ್ತಿರುವ ಡ್ರೀಮ್ಡ್ ಅರಣ್ಯದ ಸಮಸ್ಯೆ ಶೀಘ್ರದಲ್ಲಿ ಬಗೆಹರಿಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮಾತನಾಡಿ, ಈ ಭಾಗದಲ್ಲಿ ಅಂರ್ತಜಲ ವೃದ್ಧಿಗೆ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುತ್ತಿದ್ದು, 2018 ರಿಂದ 2023 ರ ಅವಧಿಯೊಳಗೆ 100 ಕಿಂಡಿ ಅಣೆಕಟ್ಟು ನಿರ್ಮಿಸುವ ಯೋಜನೆಯಿದೆ.

ಡ್ರೀಮ್ಡ್ ಫಾರೆಸ್ಟ್ ನಿಂದ ಈ ಭಾಗದಲ್ಲಿ ಅಭಿವೃದ್ದಿ ಕುಂಠಿತವಾಗಿದ್ದು, ಪ್ರಸ್ತುತ ಸರಕಾರ ಡ್ರೀಮ್ಡ್ ಫಾರೆಸ್ಟ್ ನಿಂದ ಭೂಮಿಯನ್ನು ಕೈಬಿಡುವ ಕುರಿತಂತೆ ಸುಪ್ರೀಂಕೋಟ್ ಗೆ ಅಫಿಡವಿಟ್ ಸಲ್ಲಿಸಿದ್ದು, ಈ ಬಗ್ಗೆ ಶೀಘ್ರದಲ್ಲಿ ಸರ್ಕಾರದ ಸುತ್ತೋಲೆ ಆಗಲಿದೆ, ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದರು.

ಶಿವಪುರ ಗ್ರಾಮದ ದೇವಸ್ಥಾನಬೆಟ್ಟು ನಲ್ಲಿ 150 ಲಕ್ಷ ರೂ, ಪುತ್ತಿಬೆಟ್ಟು ನಲ್ಲಿ 150 ಲಕ್ಷ ರೂ, ಮುಕ್ಕಾಣಿ ಗೋನುಮಾರು ನಲ್ಲಿ 155 ಲಕ್ಷ ರೂ, ಕುಂಟೆಬೆಟ್ಟು ನಲ್ಲಿ 105 ಲಕ್ಷ ರೂ ಸೇರಿದಂತೆ ಒಟ್ಟು 560 ಲಕ್ಷ ರೂ ಗಳ ಕಿಂಡಿ ಆಣೆಕಟ್ಟು ಕಾಮಗಾರಿಗಳನ್ನು ಸಚಿವ ಮಾಧುಸ್ವಾಮಿ ಉದ್ಘಾಟಿಸಿದರು.

ಶಿವಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ, ವರಂಗ ಗ್ರಾ.ಪಂ.ಅಧ್ಯಕ್ಷೆ ಉಷಾ ಹೆಬ್ಬಾರ್, ಸಣ್ಣ ನೀರಾವರಿ ಇಲಾಖೆ ಮುಖ್ಯ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಮೆಸ್ಕಾಂ ನ ನಿರ್ದೇಶಕ ದಿನೇಶ್ ಪೈ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!