Monday, February 24, 2025
Monday, February 24, 2025

ಸಾಲಿಗ್ರಾಮ- ಭಜನಾ ಸೇವಾ ಕಾರ್ಯಕ್ರಮ

ಸಾಲಿಗ್ರಾಮ- ಭಜನಾ ಸೇವಾ ಕಾರ್ಯಕ್ರಮ

Date:

ಕೋಟ: ಕೂಟಮಹಾಜಗತ್ತು ಅಂಗಸಂಸ್ಥೆ ಸಾಲಿಗ್ರಾಮ ಇದರ ವತಿಯಿಂದ ಭಜನಾ ಸೇವಾ ಕಾರ್ಯಕ್ರಮ ಶ್ರೀದೇವಳದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದ ಅಧ್ಯಕ್ಷ ಡಾ. ಕೆ.ಎಸ್.ಕಾರಂತ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಪೇಜಾವರ ಶ್ರೀ ವಿಶ್ವೇಶತೀರ್ಥರನ್ನು ಉದಾಹರಿಸುತ್ತಾ ಭಗವಂತನ ಓಲೈಕೆಯ ಮಾರ್ಗಗಳಲ್ಲಿ ಭಜನೆಯು ಸುಲಭ ಸಾಧ್ಯವೂ ವೈಜ್ಞಾನಿಕವೂ ಆಗಿದೆ ಎಂದರು. ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆಯ ನಿಕಟಪೂರ್ವ ಉಪಾಧ್ಯಕ್ಷ ಕೆ. ತಾರಾನಾಥ ಹೊಳ್ಳರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಿಯುಕ್ತಿಗೊಂಡ ಹಿನ್ನಲ್ಲೆಯಲ್ಲಿ ಗೌರವಿಸಲಾಯಿತು.

ಭಜನಾ ಕಾರ್ಯಕ್ರಮದ ಹಿನ್ನಲ್ಲೆಯಲ್ಲಿ ಕೂಟ ಮಹಾಜಗತ್ತು ಅಂಗಸಂಸ್ಥೆಯ ಕಾರ್ಯದರ್ಶಿ ಮಹಾಬಲ ಹೇರ್ಳೆಯವರನ್ನು ದೇವಳದ ಪರವಾಗಿ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ ಪ್ರಸಾದವನ್ನು ನೀಡಿ ಶುಭ ಹಾರೈಸಿದರು.

ಕೂಟ ಮಹಾಜಗತ್ತು ಅಂಗಸಂಸ್ಥೆಯ ಅಧ್ಯಕ್ಷ ಶ್ರೀಪತಿ ಅಧಿಕಾರಿ ಸ್ವಾಗತಿಸಿದರು. ಉಜಿರೆ ಸಂತಾನ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಮತ್ತು ಮುಖ್ಯಸ್ಥರಾದ ರವೀಂದ್ರ ಉಪ್ಪಂತಾಯ, ಪೂರ್ವ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಐತಾಳ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!