Sunday, January 19, 2025
Sunday, January 19, 2025

ತುಳುನಾಡಿನ ಧಾರ್ಮಿಕ ಆಚರಣೆಗೆ ಜಿಲ್ಲಾಡಳಿತ ಸಹಕಾರ ನೀಡಲಿ: ಯಶ್ಪಾಲ್ ಸುವರ್ಣ

ತುಳುನಾಡಿನ ಧಾರ್ಮಿಕ ಆಚರಣೆಗೆ ಜಿಲ್ಲಾಡಳಿತ ಸಹಕಾರ ನೀಡಲಿ: ಯಶ್ಪಾಲ್ ಸುವರ್ಣ

Date:

ಉಡುಪಿ, ಅ.28: ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭದಲ್ಲಿ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರವನ್ನು ಪುನರ್ ಪರಿಶೀಲಿಸಿ ಸಹಕರಿಸುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ದೈವಾರಾಧನೆಯ ಚೌಕಟ್ಟಿನಲ್ಲಿ ದೈವಗಳಿಗೆ ರಕ್ತಹಾರದ ಕಲ್ಪನೆಯಲ್ಲಿ ಹಲವು ದೈವಸ್ಥಾನ, ಮಂದಿರಗಳಲ್ಲಿ ಹಲವಾರು ದಶಕಗಳಿಂದ ಕೋಳಿಪಡೆ ಆಯೋಜಿಸುವ ಪದ್ಧತಿ ಇದೆ, ಹಾಗೂ ಜಿಲ್ಲೆಯಾದ್ಯಂತ ಯಕ್ಷಗಾನ, ನೇಮೋತ್ಸವ ಕಾರ್ಯಕ್ರಮಗಳು ಈ ಹಿಂದಿನಿಂದಲೂ ನಿರಂತರವಾಗಿ ನಡೆಯುತ್ತಿದ್ದು ಈ ಬಗ್ಗೆ ಜಿಲ್ಲಾಡಳಿತ ತುಳುನಾಡಿನ ಸಾಂಸ್ಕೃತಿಕ ಹಿನ್ನೆಲೆ, ಧಾರ್ಮಿಕ ನಂಬಿಕೆಗಳಿಗೆ ಪೂರಕವಾಗಿ ಅವಕಾಶ ನೀಡಿ ಸಹಕರಿಸಬೇಕು. ಶೀಘ್ರದಲ್ಲಿಯೇ ಜಿಲ್ಲೆಯ ಎಲ್ಲಾ ಶಾಸಕರು ಜಿಲ್ಲಾಡಳಿತದೊಂದಿಗೆ ಈ ಬಗ್ಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಸುಮಾರು 5 ತಿಂಗಳು ಕಳೆದರೂ ಈವರೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಯದೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಬಹುತೇಕ ಸ್ಥಗಿತಗೊಂಡಿದೆ. ವಿವಿಧ ಇಲಾಖೆಗಳ ಹಲವಾರು ಯೋಜನೆಗಳ ಅನುದಾನ ಬಿಡುಗಡೆಯಾಗದೇ ಅತಂತ್ರವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!