Monday, January 20, 2025
Monday, January 20, 2025

ಪುತ್ತಿಗೆ ಪರ್ಯಾಯಕ್ಕೆ ಪೂರ್ಣ ಸಹಕಾರ: ಲಕ್ಷ್ಮಿ ಹೆಬ್ಬಾಳ್ಕರ್

ಪುತ್ತಿಗೆ ಪರ್ಯಾಯಕ್ಕೆ ಪೂರ್ಣ ಸಹಕಾರ: ಲಕ್ಷ್ಮಿ ಹೆಬ್ಬಾಳ್ಕರ್

Date:

ಉಡುಪಿ, ನ.1: ಉಡುಪಿಯ ಶ್ರೀ ಪುತ್ತಿಗೆ ಪರ್ಯಾಯ ಸಮಿತಿಯ ಮಹಾಪೋಷಕರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರನ್ನು ನೇಮಿಸಲಾಗಿದೆ. ಪುತ್ತಿಗೆ ಮಠದಲ್ಲಿ ಬುಧವಾರ ನಡೆದ ಪರ್ಯಾಯೋತ್ಸವ ಪೂರ್ವಭಾವಿ ಸಭೆಯಲ್ಲಿ ಸಚಿವರನ್ನು ಪರ್ಯಾಯ ಸಮಿತಿಯ ಮಹಾಪೋಷಕರನ್ನಾಗಿ ಘೋಷಿಸಲಾಯಿತು.
ಬಳಿಕ ಮಾತನಾಡಿದ ಸಚಿವರು, ಮುಂದಿನ ಜನವರಿಯಲ್ಲಿ ನಡೆಯಲಿರುವ ಶ್ರೀ ಪುತ್ತಿಗೆ ಪರ್ಯಾಯೋತ್ಸವಕ್ಕೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಪೂರ್ಣ ಪ್ರಮಾಣದ ಸಹಕಾರ ನೀಡಲಾಗುವುದು ಎಂದರು.

ಮುಂದಿನ ಉಡುಪಿ ಭೇಟಿ ವೇಳೆ ಜಿಲ್ಲಾಡಳಿತದ ವತಿಯಿಂದ ಪರ್ಯಾಯೋತ್ಸವ ಸಂಬಂಧ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗುವುದು ಎಂದರು. ಪುತ್ತಿಗೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಶ್ರೀ ಕೃಷ್ಣ ಪರಮಾತ್ಮ ನನಗೆ ಕರುಣಿಸಿದ್ದಾನೆ. ಪುತ್ತಿಗೆ ಮಠ ದೇಶ, ವಿದೇಶಗಳಲ್ಲೂ ಪ್ರಸಿದ್ಧಿ ಪಡೆದಿದೆ. ಹಿಂದೂ‌ ಸಂಸ್ಕೃತಿ ಶ್ರೇಷ್ಠ ಸಂಸ್ಕೃತಿ. ಇದನ್ನು ಉಳಿಸಿ, ಬೆಳಸುವ ಕರ್ತವ್ಯ ನಮ್ಮದು. ನಮ್ಮ ಸಂಸ್ಕೃತಿಯನ್ನು ಪುತ್ತಿಗೆ ಶ್ರೀಗಳು ವಿದೇಶಿ ನೆಲದಲ್ಲಿ ಪಸರಿಸುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಯಾವುದೇ ರಾಜಕೀಯ ತರದೇ ಭಕ್ತಿಭಾವದಿಂದ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳೋಣ. ದೇಶ ವಿದೇಶಗಳಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಸಕಲ ವ್ಯವಸ್ಥೆಯನ್ನು ಮಾಡೋಣ ಎಂದರು. ಪುತ್ತಿಗೆ ಪರ್ಯಾಯ ಸಮಿತಿ ಮಹಾ ಪೋಷಕರನ್ನಾಗಿ ನನ್ನನ್ನು ನೇಮಿಸಿದ್ದು, ಈ ಹುದ್ದೆಗೆ ತಕ್ಕಂತೆ ಕಾರ್ಯನಿರ್ವಹಿಸುವೆ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಪುತ್ತಿಗೆ ಮಠದ ದಿವಾನರಾದ ನಾಗರಾಜ್ ಆಚಾರ್ಯ, ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷ ಹಾಗು ಮಾಜಿ ಶಾಸಕ ಕೆ. ರಘುಪತಿ ಭಟ್, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಸ್ವಾಗತ ಸಮಿತಿಯ ಕೋಶಾಧಿಕಾರಿ ರಂಜನ್ ಕಲ್ಕೂರ, ಉಪಾಧ್ಯಕ್ಷರುಗಳಾದ ಪ್ರಸಾದರಾಜ್ ಕಾಂಚನ್, ಜಯಕರ ಶೆಟ್ಟಿ ಇಂದ್ರಾಳಿ, ದಿನೇಶ್ ಪುತ್ರನ್, ರಮೇಶ್ ಕಾಂಚನ್, ಪದಾಧಿಕಾರಿಗಳಾದ ಶ್ರೀಪತಿ ಭಟ್, ಭಾಸ್ಕರ್ ರಾವ್ ಕಿದಿಯೂರು, ವಿಜಯರಾಘವ ರಾವ್, ಎಮ್.ಎಲ್.ಸಾಮಗ, ಕೆ. ರವೀಂದ್ರ ಆಚಾರ್ಯ, ಕೆ. ರಘುಪತಿ ರಾವ್, ವಿದ್ವಾನ್ ಗೋಪಾಲಾಚಾರ್ಯ, ಹಯವದನ ಭಟ್, ಬಿ. ಕುಶಲ ಶೆಟ್ಟಿ, ಶೇಷಶಯನ, ವಿಷ್ಣುಮೂರ್ತಿ ಉಪಾಧ್ಯಾಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!