ಮಲ್ಪೆ, ನ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಸಹಯೋಗ ನೀಡಿದ ಲಯನ್ಸ್ ಅಮೃತ್ ಉಡುಪಿ ಇದರ ಅಧ್ಯಕ್ಷರಾದ ಭಾರತಿ ಹೆಚ್.ಎಸ್. ಮುಖ್ಯ ಅತಿಥಿಯಾಗಿ ಆಗಮಿಸಿ ರಾಜ್ಯೋತ್ಸವದ ಶುಭಾಶಗಳನ್ನು ಕೋರಿದರು. ಕನ್ನಡ ನಾಡಿನ ಉಗಮ ಏಕೀಕರಣದ ಸಂಕಷ್ಟಗಳನ್ನು ವಿವರಣೆ ನೀಡಿದ ಕನ್ನಡ ಪ್ರಾಧ್ಯಾಪಕರಾದ ರಾಧಾಕೃಷ್ಣ, ಯಾವ ರೀತಿಯಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತೋ, ಅದೇ ಮಾದರಿಯಲ್ಲಿ ಕರ್ನಾಟಕದ ಏಕೀಕರಣಕ್ಕೂ ಹೋರಾಡಿದ ವಿಚಾರದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ., ಏಕೀಕರಣದ ಐತಿಹಾಸಿಕ ಘಟನೆಗಳನ್ನು ಸ್ಮರಿಸಿದರು.
ಹೆಸರಾಯಿತು ಕರ್ನಾಟಕ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಇತ್ಯಾದಿ ಗಾಯನಗಳನ್ನು ರೋವರ್-ರೇಂಜರ್, ಎನ್.ಎಸ್.ಎಸ್. ಹಾಗೂ ರೆಡ್‌ಕ್ರಾಸ್ ವಿದ್ಯಾರ್ಥಿಗಳು ಹಾಡಿದರು. ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ ಹಾಗೂ ಗಣಕ ವಿಜ್ಞಾನ ಸಹಾಯಕ ಪ್ರಾಧ್ಯಾಪಕರಾದ ಪ್ರಸಾದ್ ಹೆಚ್.ಎಂ., ಕನ್ನಡ ಭಾವಗೀತೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ. ಹಾಗೂ ಬೋಧಕ ಬೋಧಕೇತರರು ಭಾಗವಹಿಸಿದ್ದರು.