Monday, January 20, 2025
Monday, January 20, 2025

ಉಡುಪಿ: ಉದ್ಯಮಶೀಲತಾ ತರಬೇತಿ

ಉಡುಪಿ: ಉದ್ಯಮಶೀಲತಾ ತರಬೇತಿ

Date:

ಉಡುಪಿ, ನ.3: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕರ್ನಾಟಕ ಸರ್ಕಾರ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಹಾಗೂ ತಾಲೂಕು ಪಂಚಾಯತ್ ಉಡುಪಿ ಇವರ ಸಹಯೋಗದೊಂದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ದಿನಕರ್ ಬಾಬು ಕಾರ್ಯಕ್ರಮ ಉದ್ಘಾಟಿಸಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಗೂ ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳ ಫಲಾನುಭವಿಗಳು ಕೌಶಲ್ಯ ಅಭಿವೃದ್ಧಿ ತರಬೇತಿ ಪಡೆಯುವುದು ಅತಿ ಅವಶ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಇಲಾಖೆಯ ಜಂಟಿ ನಿರ್ದೇಶಕ ಅರವಿಂದ ಡಿ ಬಾಳೇರಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಹಾಗೂ ಕೌಶಲ್ಯಾಭಿವೃದ್ಧಿ ಆಕಾಂಕ್ಷಿಗಳಿಗೆ ಎಲ್ಲಾ ಕ್ಷೇತ್ರದಲ್ಲಿಯೂ ತರಬೇತಿಯನ್ನು ಇಲಾಖೆಯ ವತಿಯಿಂದ ನೀಡಲಾಗುತ್ತಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಜಯ, ಸಿಡಾಕ್‌ನ ತರಬೇತುದಾರರಾದ ಪೃಥ್ವಿರಾಜ್ ನಾಯಕ್ ಮತ್ತು ಶ್ರುತಿ ಉಪಸ್ಥಿತರಿದ್ದರು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಮಂಗಳೂರಿನ ಅಧ್ಯಕ್ಷ ಮೋಹನಾಂಗಯ್ಯ ಸ್ವಾಮಿ ಹಾಗೂ ಎನ್‌ಯುಎಲ್‌ಎಮ್ ಉಡುಪಿಯ ವ್ಯವಸ್ಥಾಪಕ ರಾಮಕೃಷ್ಣ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!