ಮಣಿಪಾಲ, ನ.3: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯೋಜನೆಯಡಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯಿದೆಯ ಕುರಿತು ಅರಿವು ಮೂಡಿಸುವ ಆಟೋ ಜಾಥಾ ಕಾರ್ಯಕ್ರಮಕ್ಕೆ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಸನ್ನ ಹೆಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಕಾರ್ಮಿಕ ಅಧಿಕಾರಿ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.