Tuesday, September 8, 2026
Tuesday, September 8, 2026

ತೆಂಕನಿಡಿಯೂರು ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

Date:

ಮಲ್ಪೆ, ನ.8: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ೨೦೨೩-೨೪ನೇ ಸಾಲಿನ ಪ್ರಥಮ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಜಗದೀಶ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಶೈಕ್ಷಣಿಕವಾಗಿ ಉತ್ತಮ ಹೆಸರು ಗಳಿಸಿರುವ ಈ ಸಂಸ್ಥೆಯಲ್ಲಿ ಹೊಣೆಗಾರಿಕೆಯಿಂದ ಅಧ್ಯಯನ ಮಾಡುವಂತೆ ಕರೆಯಿತ್ತು ಶುಭ ಹಾರೈಸಿದರು. ರೆಡ್‌ಕ್ರಾಸ್ ಘಟಕ ಉಡುಪಿ ಗೌರವ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ, ಸ್ನಾತಕೋತ್ತರ ಅಧ್ಯಯನದಲ್ಲಿ ವೈಚಾರಿಕ ಪ್ರಜ್ಞೆಯೊಂದಿಗೆ ಕೌಶಲ, ಆರೋಗ್ಯ ಮತ್ತು ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಜ್ಞಾನಾರ್ಜನೆ ಮಾಡುವುದು ಇಂದಿನ ಅಗತ್ಯ ಎಂದರು.

ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕ ಸಂಚಾಲಕ ಡಾ. ಪ್ರಸಾದ್ ರಾವ್ ಎಂ., ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ಮೇವಿ ಮಿರಾಂದ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು ಮತ್ತು ಅಧ್ಯಾಪಕರು ಉಪಸ್ಥಿತರಿದ್ದರು. ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರಾಘವ ನಾಯ್ಕ ಸ್ವಾಗತಿಸಿ, ಕನ್ನಡ ವಿಭಾಗ ಮುಖ್ಯಸ್ಥ ಪ್ರೊ. ಜಯಪ್ರಕಾಶ್ ಶೆಟ್ಟಿ ಹೆಚ್. ವಂದಿಸಿದರು. ಅಮೃತ ಮತ್ತು ಬಳಗ ಪ್ರಥಮ ಎಂ.ಎ. ಇಂಗ್ಲಿಷ್ ಪ್ರಾರ್ಥಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕಿ ರತ್ನಮಾಲಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!