Thursday, February 27, 2025
Thursday, February 27, 2025

ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ದೇಶಕ್ಕೆ ಮಾದರಿ: ಶಾಸಕ ಯಶ್‌ಪಾಲ್ ಸುವರ್ಣ

ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ದೇಶಕ್ಕೆ ಮಾದರಿ: ಶಾಸಕ ಯಶ್‌ಪಾಲ್ ಸುವರ್ಣ

Date:

ಉಡುಪಿ, ನ.8: ಸಂಜೀವಿನಿ ಸ್ವ-ಸಹಾಯ ಸಂಘದ ಮಹಿಳೆಯರು ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಉಡುಪಿ ಜಿಲ್ಲೆಯು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. ಅವರು ಬುಧವಾರ ಉಡುಪಿ ತಾಲೂಕು ಪಂಚಾಯತ್ ಆವರಣದಲ್ಲಿರುವ ಸಂಜೀವಿನಿ ಮಾರಾಟ ಮಳಿಗೆಯಲ್ಲಿ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ವಿವಿಧ ವಿನ್ಯಾಸದ ಮಣ್ಣಿನ ಹಣತೆ, ದೀಪಾವಳಿ ಗಿಫ್ಟ್ ಪ್ಯಾಕ್ ಹಾಗೂ ಉಡುಪಿ ಸಂಜೀವಿನಿ ಕಜೆ ಅಕ್ಕಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಸಂಜೀವಿನಿ ಸಂಘದ ಸದಸ್ಯರ ಹಡಿಲು ಗದ್ದೆ ಕೃಷಿಯು ಜನರಲ್ಲಿ ಕೃಷಿಯ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಭತ್ತದ ಬೆಳೆಯ ಜೊತೆಗೆ ತರಕಾರಿ ಬೆಳೆಯುವುದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ಅನುದಾನವನ್ನು ಸದ್ಭಳಕೆ ಮಾಡಿಕೊಳ್ಳುವುದರೊಂದಿಗೆ ವರ್ಷದ 12 ತಿಂಗಳೂ ಗದ್ದೆಗಳಲ್ಲಿ ಕೆಲಸ ಮಾಡುವಂತಾಗಬೇಕು. ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳ ಮಾರ್ಗದರ್ಶನ ಅತೀ ಅಗತ್ಯ ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಸಂಜೀವಿನಿ ಸ್ವ-ಸಹಾಯ ಸಂಘದ ತಯಾರಿಸಿದ ದೀಪಾವಳಿ ಗಿಫ್ಟ್ ಪ್ಯಾಕ್‌ಗಳನ್ನು ಗ್ರಾಹಕರು ಖರೀದಿಸುವಂತೆ ತಿಳಿಸಿದ ಅವರು, ಹಡಿಲು ಗದ್ದೆಯಲ್ಲಿ ಬೆಳೆದಿರುವ ಕಜೆ ಅಕ್ಕಿಯು ಸಾವಯವ ವಿಧಾನದಲ್ಲಿ ಬೆಳೆಯುವುದರಿಂದ ಆರೋಗ್ಯಕ್ಕೆ ಉತ್ತಮವಾಗಿದ್ದು, ಇದನ್ನು ಸಾರ್ವಜನಿಕರು ಬಳಸುವುದರೊಂದಿಗೆ ಅವರುಗಳಿಗೆ ನೆರವಾಗಿರಬೇಕು. ಸಂಜೀವಿನಿ ಸಂಘದ ಸದಸ್ಯರು ಸ್ವ-ಸಾಮಥ್ಯದ ಮೂಲಕ ರಾಜ್ಯದ ಇತರೆ ಹೆಣ್ಣುಮಕ್ಕಳಿಗೆ ಮಾದರಿಯಾಗಿದ್ದಾರೆ ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಮಾತನಾಡಿ, ಗ್ರಾಮೀಣ ಮಹಿಳೆಯರು ತಯಾರಿಸುವ ಉತ್ಪನ್ನಕ್ಕೆ ಬೇಡಿಕೆ ಹೆಚ್ಚಿಸುವ ಸಲುವಾಗಿ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ದೀಪಾವಳಿ ಹಬ್ಬಕ್ಕೆ ಮಣ್ಣಿನ ಹಣತೆಯ ಬೇಡಿಕೆ ಇರುವುದರಿಂದ ಸಂಜೀವಿನಿ ಸ್ವ-ಸಹಾಯ ಸಂಘದ ಮಹಿಳೆಯರು ವಿವಿಧ ವಿನ್ಯಾಸದ ಮಣ್ಣಿನ ಹಣತೆಗಳನ್ನು ತಯಾರಿಸಿದ್ದು, ಅವುಗಳನ್ನು ಹೆಚ್ಚಾಗಿ ಖರೀದಿಸುವ ಮೂಲಕ ಅವರುಗಳಿಗೆ ಪ್ರೋತ್ಸಾಹ ನೀಡಬೇಕು. ಇದರಲ್ಲಿ ಮಧ್ಯವರ್ತಿಗಳ ಹಾವಳಿಯಿಲ್ಲದಿರುವುದರಿಂದ ಇದರ ಲಾಭವನ್ನು ನೇರವಾಗಿ ಸಂಜೀವಿನಿ ಸದಸ್ಯರು ಪಡೆಯಲಿದ್ದಾರೆ ಎಂದರು.

ಜಿ. ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿ.ಪಂ. ಯೋಜನಾ ನಿರ್ದೇಶಕ ಪ್ರಶಾಂತ್ ರಾವ್, ಕೃಷಿ ಇಲಾಖೆಯ ಚಂದ್ರಶೇಖರ್, ಉಡುಪಿ ತಾ.ಪಂ. ಕಾರ್ಯನಿರ್ವಹಣಾಕಾರಿ ವಿಜಯಾ, ಸಂಜೀವಿನಿ ಒಕ್ಕೂಟದ ಸದಸ್ಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!