ಉಡುಪಿ, ನ. 9: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಉಡುಪಿ ಎನ್.ಸಿ.ಡಿ. ವಿಭಾಗ, ಜಿಲ್ಲಾ ಸರ್ವೇಕ್ಷಣ ಘಟಕ ಎನ್.ಸಿ.ಡಿ. ಸಮುದಾಯ ವೈದ್ಯಕೀಯ ವಿಭಾಗ, ದಂತ ವೈದ್ಯಕೀಯ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಮಣಿಪಾಲ, ಪ್ರಸಾದ್ ನೇತ್ರಾಲಯ ಉಡುಪಿ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಉಡುಪಿ ಇವರ ಸಂಯುಕ್ತ ಆಶ್ರಯದೊಂದಿಗೆ ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ಉಡುಪಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ಶಿಬಿರ ಗುರುವಾರ ನಡೆಯಿತು.
ಶಿಬಿರವನ್ನು ಸಮುದಾಯ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಈಶ್ವರಿ ಕೆ. ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಉಡುಪಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ನಿರ್ವಾಹಕರಾದ ಸುಮ ಅವರು ಅಧ್ಯಕ್ಷತೆ ವಹಿಸಿದ್ದರು. ಡಾ. ಹರ್ಷಿತಾ, ಪ್ರಸಾದ್, ಡಾ. ಗುರುಪ್ರಸಾದ್, ಆಪ್ತ ಸಮಾಲೋಚಕರಾದ ಮನು ಎಸ್. ಬಿ.ಅವರು ಉಪಸ್ಥಿತರಿದ್ದರು.
ಕಸ್ತೂರ್ಬಾ ಆಸ್ಪತ್ರೆಯ ವಿವಿಧ ವಿಭಾಗದ ವೈದ್ಯರು ಮಧುಮೇಹ ರಕ್ತ ತಪಾಸಣೆ,ಚರ್ಮ ರೋಗ ತಪಾಸಣೆ, ಕಣ್ಣಿನ ತಪಾಸಣೆ, ರಕ್ತದೊತ್ತಡ ತಪಾಸಣೆ, ದಂತ ತಪಾಸಣೆ, ಇ.ಸಿ.ಜಿ. ಪರೀಕ್ಷೆ ಹಾಗೂ ಇ.ಎನ್.ಟಿ. ತಪಾಸಣೆಯನ್ನು ನಡೆಸಿದರು. 80 ಜನರು ಶಿಬಿರದ ಪ್ರಯೋಜನ ಪಡೆದುಕೊಂಡರು. ರಘುರಾಮ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.