Saturday, October 19, 2024
Saturday, October 19, 2024

ಆದಿ ಉಡುಪಿ: ನಿಷೇಧಿತ ಪ್ಲಾಸ್ಟಿಕ್ ವಶ: ದಂಡ ವಸೂಲಿ

ಆದಿ ಉಡುಪಿ: ನಿಷೇಧಿತ ಪ್ಲಾಸ್ಟಿಕ್ ವಶ: ದಂಡ ವಸೂಲಿ

Date:

ಉಡುಪಿ, ನ.9: ಉಡುಪಿ ನಗರಸಭಾ ವ್ಯಾಪ್ತಿಯ ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 81 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 12,400 ರೂ. ದಂಡ ವಿಧಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಸೂಚಿಸಲಾಯಿತು. ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್, ರಿಸೈಕಲ್ ಮಾದರಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಕಡಿಮೆ ಮಾಡುವ ಹಿತ ದೃಷ್ಟಿಯಿಂದ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಬೇಕು. ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡುವುದು, ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು.

ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್‌ವೈಸರ್‌ನವರು ಹಾಗೂ ಪೌರಕಾರ್ಮಿಕರು ಅನಿರೀಕ್ಷಿತ ದಾಳಿ ನಡೆಸುತ್ತಿದ್ದು, ಸಾರ್ವಜನಿಕರು, ಉದ್ದಿಮೆದಾರರು, ವ್ಯಾಪಾರಿಯವರು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡುಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸುವುದರೊಂದಿಗೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!