Tuesday, January 21, 2025
Tuesday, January 21, 2025

ಮಾಲಿನ್ಯ ನಿಯಂತ್ರಣ ಮಾಡುವುದು ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ: ಜಿ.ಪಂ. ಸಿ.ಇ.ಓ ಪ್ರಸನ್ನ ಹೆಚ್

ಮಾಲಿನ್ಯ ನಿಯಂತ್ರಣ ಮಾಡುವುದು ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ: ಜಿ.ಪಂ. ಸಿ.ಇ.ಓ ಪ್ರಸನ್ನ ಹೆಚ್

Date:

ಉಡುಪಿ, ನ.10: ಮಾಲಿನ್ಯ ನಿಯಂತ್ರಣ ಮಾಡುವುದರೊಂದಿಗೆ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರಿಗೆ ಇಲಾಖೆ ವತಿಯಿಂದ ನಡೆದ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ವಾಯುವಿನ ಗುಣಮಟ್ಟ ಉತ್ತಮವಾಗಿದೆ. ಇದಕ್ಕೆ ಮುಖ್ಯ ಕಾರಣ ಇಲ್ಲಿನ ಪರಿಸರದ್ಲಲಿರುವ ಗಿಡ-ಮರಗಳಾಗಿವೆ. ಇವುಗಳನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ. ನಾವು ಈ ಹಿಂದೆ ದೆಹಲಿಯಲ್ಲಿ ಕಾರ್ಯನಿರ್ವಹಿಸುವಾಗ ಅಲ್ಲಿನ ವಾಯುಮಾಲಿನ್ಯ ಎಷ್ಟಿತ್ತೆಂದರೆ ಮನೆಯಿಂದ ಹೊರಗಡೆ ಬಂದರೆ ಕಣ್ಣುರಿ ಉಂಟಾಗುತ್ತಿತ್ತು. ಕೆಲವರಿಗೆ ಉಸಿರಾಡಲು ತೊಂದರೆಯಾಗುತ್ತಿತ್ತು. ಇದಕ್ಕೆಲ್ಲಾ ಕಾರಣ ವಾಹನಗಳು ಹೊರಸೂಸುವೆ ಹೊಗೆ ಹಾಗೂ ನೆರೆಯ ಪಂಜಾಬ್ ಹರಿಯಾಣದಲ್ಲಿ ಕೊಳೆ ಸುಡುವ ಪರಿಪಾಠ ಕಾರಣವಾಗಿತ್ತು ಎಂದರು.

ಕಳೆದ ಜೂನ್ ತಿಂಗಳಲ್ಲಿ ಸರಕಾರ ಒಂದು ಕೋಟಿಗೂ ಹೆಚ್ಚು ಗಿಡ-ಮರಗಳನ್ನು ನೆಟ್ಟಿದೆ. ಇದು ಪರಿಸರ ಸಂರಕ್ಷಣೆಗೆ ಸಹಕಾರಿಯಾಗಲಿದೆ. ಗಿಡ-ಮರಗಳ ಬೆಳೆಸುವಿಕೆಯಿಂದ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು. ವಾಯುಮಾಲಿನ್ಯ ಹಾಗೂ ಪರಿಸರ ಮಾಲಿನ್ಯಕ್ಕೆ ಶಿಕ್ಷಿತರು ಹಾಗೂ ಶ್ರೀಮಂತರೇ ಮುಖ್ಯ ಕಾರಣ. ಬಡಗುಬೆಟ್ಟು ಗ್ರಾಮ, ಪಂಚಾಯತ್ ವ್ಯಾಪ್ತಿಯ ಮಣಿಪಾಲದ ಕೆಲವು ಶಿಕ್ಷಿತರು ತಮ್ಮ ಮನೆಯ ಕಸವನ್ನು ಕಸ ಸಂಗ್ರಹಣಾಗಾರರಿಗೆ ನೀಡದೇ, ಕಸವನ್ನು ಸುಡುತ್ತಿರುವುದು ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ. ಕೆಲವು ಶ್ರೀಮಂತರು ಬೆಳಗಿನ ವಾಯುವಿಹಾರಕ್ಕೆ ಜಿಲ್ಲಾ ಆಟದ ಮೈದಾನಕ್ಕೆ ವಾಹನಗಳಲ್ಲಿ ಬಂದು ಅಲ್ಲಿನ ಜಿಮ್‌ನಲ್ಲಿ ಥ್ರೆಡ್‌ಮಿಲ್‌ಗಳನ್ನು ಬಳಸುತ್ತಾರೆ. ವಾಹನಗಳಲ್ಲಿ ಬರುವ ಬದಲು ಅವರುಗಳು ಮನೆಯಿಂದಲೇ ನಡೆದು ಬಂದರೆ ವಾಹನದಿಂದ ಹೊರಸೂಸುವ ಹೊಗೆಯನ್ನು ನಿಯಂತ್ರಿಸಿ, ಮಾಲಿನ್ಯ ಕಡಿಮೆಗೊಳಿಸಬಹುದು ಎಂದರು.

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಬಿ ಮಾತನಾಡಿ, ಇತ್ತೀಚೆಗೆ ವಾಯು ಮಾಲಿನ್ಯದಿಂದ ಹವಾಮಾನ ಬದಲಾವಣೆ ಸೇರಿದಂತೆ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತಿದೆ. ಇದರ ನಿಯಂತ್ರಣಕ್ಕೆ ಪ್ರತಿಯೊಬ್ಬ ಜನಸಾಮಾನ್ಯರು ಮುಂದಾಗುವುದರೊಂದಿಗೆ ಪರಿಸರಕ್ಕೆ ಕೊಡುಗೆ ನೀಡಲು ಮುಂದಾಗಬೇಕು ಎಂದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಪಿ. ರವಿಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕಿಂತ ಹೆಚ್ಚಾಗಿ ಇಂಗ್ಲೀಷ್ ಅನ್ನು ಬಳಕೆ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಅಂತಾರಾಷ್ಟ್ರೀಯ ಗುಣಮಟ್ಟದ ಶ್ರೇಷ್ಠ ಕೃತಿಗೆ ನೀಡುವ ಜ್ಞಾನಪೀಠ ಪ್ರಶಸ್ತಿಗಳು ಹಿಂದಿ ಭಾಷೆ 11 ಪ್ರಶಸ್ತಿ ಪಡೆದರೆ, ಕನ್ನಡ ಭಾಷೆಗೆ ಎಂಟು ಪ್ರಶಸ್ತಿಗಳನ್ನು ಪಡೆದು ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ್ದಾರೆ ಎಂದ ಅವರು, ಪ್ರಸ್ತುತ ದೆಹಲಿಯ ವಾಯು ಮಾಲಿನ್ಯ ಸೂಚ್ಯಾಂಕವು 400 ರ ಗಡಿ ದಾಟಿದ್ದು, ಗಂಭೀರ ಸ್ಥಿತಿ ಪರಿಣಮಿಸಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೀಗಾಗದಂತೆ ಜಾಗೃತರಾಗುವುದು ಅತಿಅವಶ್ಯಕತೆ ಇದೆ ಎಂದರು.

ಕಾರ್ಯಕ್ರಮದಲ್ಲಿ ದಂತ ವೈದ್ಯ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಘಟಕದ ಮುಖ್ಯಸ್ಥ ಡಾ. ವಿಜಯೇಂದ್ರ, ಕರಾವಳಿ ಬಸ್ಸು ಮಾಲಕರ ಸಂಘದ ಜಿಲ್ಲಾ ಅಧ್ಯಕ್ಷ ರಾಘವೇಂದ್ರ ಭಟ್, ಕೆ.ಎಸ್.ಆರ್.ಟಿ.ಸಿ ಉಡುಪಿ ವಿಭಾಗದ ಘಟಕ ವ್ಯವಸ್ಥಾಪಕ ಶಿವರಾಮ ನಾಯಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಾಂತರಾಜು ಸ್ವಾಗತಿಸಿ, ವಾಹನ ನಿರೀಕ್ಷಕ ಸಂತೋಷ್ ಶೆಟ್ಟಿ ನಿರೂಪಿಸಿ, ಸರಸ್ವತಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!