ಉಡುಪಿ, ನ.11: ಉಡುಪಿ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಹಾಗೂ ವಾಹನ ಚಾಲಕರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 14 ರಂದು ರಜೆ ನೀಡಿದ್ದು, ಸದರಿ ದಿನದಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿ ಇರುವುದಿಲ್ಲ. ಆದುದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 14: ಉಡುಪಿಯಲ್ಲಿ ಕಸ ವಿಲೇವಾರಿ ಇಲ್ಲ
ನ. 14: ಉಡುಪಿಯಲ್ಲಿ ಕಸ ವಿಲೇವಾರಿ ಇಲ್ಲ
Date: