Tuesday, February 25, 2025
Tuesday, February 25, 2025

ಗಂಗೊಳ್ಳಿ: ಬೋಟ್ ಅಗ್ನಿ ಅವಘಡ ಸ್ಥಳಕ್ಕೆ ಶಾಸಕರ ಭೇಟಿ

ಗಂಗೊಳ್ಳಿ: ಬೋಟ್ ಅಗ್ನಿ ಅವಘಡ ಸ್ಥಳಕ್ಕೆ ಶಾಸಕರ ಭೇಟಿ

Date:

ಕುಂದಾಪುರ, ನ.13: ಗಂಗೊಳ್ಳಿ ಬಂದರು ಪ್ರದೇಶದಲ್ಲಿ ನಿಲ್ಲಿಸಿದ್ದ 9 ಬೋಟ್ ಗಳು ಅಗ್ನಿ ಅವಘಡದಿಂದ ಹಾನಿಗೀಡಾದ ಸ್ಥಳಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಅಗ್ನಿ ಅವಘಡದಿಂದ ಸುಮಾರು 10 ಕೋಟಿಯಷ್ಟು ನಷ್ಟ ಉಂಟಾಗಿದ್ದು, ರಾಜ್ಯ ಸರಕಾರ ಕೂಡಲೇ ಬೋಟ್ ಮಾಲೀಕರಿಗೆ ತಲಾ 50 ಲಕ್ಷ ಪರಿಹಾರ ನೀಡಿ ಸಂಕಷ್ಟಕ್ಕೀಡಾದ ಮೀನುಗಾರರಿಗೆ ಬದುಕು ಕಟ್ಟಿಕೊಳ್ಳಲು ಸಹಕಾರ ನೀಡಬೇಕು.

ಜಿಲ್ಲೆಯ 5 ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಜೊತೆಯಾಗಿ ಸ್ಥಳೀಯ ಮೀನುಗಾರ ಮುಖಂಡರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ವಿಶೇಷ ಪ್ರಕರಣದಡಿ ಗರಿಷ್ಠ ಪರಿಹಾರ ಒದಗಿಸುವಂತೆ ಮನವಿ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕರಾವಳಿಯ ಎಲ್ಲಾ ಮೀನುಗಾರಿಕೆ ಬಂದರುಗಳಲ್ಲಿ ಬೋಟ್ ರಿಪೇರಿಗೆ ತಂಗುವ ಸ್ಥಳವನ್ನು ನಿಗದಿ ಮಾಡಿ ಅಗ್ನಿಶಾಮಕ ಘಟಕ ಸಹಿತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾಸ್ಟರ್ ಪ್ಲಾನ್ ಮಾಡಲು ಮೀನುಗಾರಿಕೆ ಇಲಾಖೆ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!