Home ಸುದ್ಧಿಗಳು ಪ್ರಾದೇಶಿಕ ನರೇಗೋತ್ಸವ ಆಚರಣೆ

ನರೇಗೋತ್ಸವ ಆಚರಣೆ

767
0

ಉಡುಪಿ: ಕರ್ನಾಟಕ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾ ಸಂಘ(ರಿ), ಉಡುಪಿ ಜಿಲ್ಲಾ ಪಂಚಾಯತ್, ಕುಂದಾಪುರ ತಾಲೂಕು ಹಾಗೂ ಹಕ್ಲಾಡಿ ಗ್ರಾಮ ಪಂಚಾಯತ್ ಇವರ ಸಹಯೋಗದೊಂದಿಗೆ ಹಕ್ಲಾಡಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ನರೇಗಾ ದಿವಸ್ ಅಂಗವಾಗಿ ನರೇಗೋತ್ಸವವನ್ನು ಆಚರಿಸಲಾಯಿತು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್ ಹಾಗೂ ಹಕ್ಲಾಡಿ ಗ್ರಾಮ ಪಂಚಾಯತ್ ಅದ್ಯಕ್ಷ ಚೇತನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಉಡುಪಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಾಬು ಎಂ ಮಾತನಾಡಿ, ನರೇಗಾ ಯೋಜನೆ ಇತರೆ ಯೋಜನೆಗಳಿಗಿಂತ ಪರಿಣಾಮಕಾರಿ, ಗ್ರಾಮೀಣ ಪ್ರದೇಶದ ಲಕ್ಷಾಂತರ ದುಡಿಯುವ ಕೈಗಳಿಗೆ ಕೆಲಸ ನೀಡುವ ಜೊತೆಗೆ ಆರ್ಥಿಕ ಸದೃಡತೆ ನೀಡಿದೆ ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆದ ನರೇಗಾ ಕಾಮಗಾರಿಗಳ ಕುರಿತು ವಿಡಿಯೋ ಡಾಕ್ಯೂಮೆಂಟರಿ ಬಿಡುಗಡೆಗೊಳಿಸಲಾಯಿತು. ಬಳಿಕ ಇ-ಶ್ರಮ್ ಯೋಜನೆಯಡಿ ಕೂಲಿಕಾರರ ನೋಂದಣಿ ಹಾಗೂ ಗುರುತಿನ ಚೀಟಿ ವಿತರಿಸಲಾಯಿತು ಮತ್ತು ಸರ್ಕಾರಿ ಸೌಲಭ್ಯಗಳ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಕಾರ್ಯಗಾರ ಮತ್ತು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವÀರಣದಲ್ಲಿ ‘ಪೌಷ್ಟಿಕ ಕೈ ತೋಟ ರಚನೆ ಕಾಮಗಾರಿಗೆ ಚಾಲನೆ ನೀಡಲಾಯಿತು.

ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ವೇತಾ ಎನ್, ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಾರತಿ, ಬೈಂದೂರು ತಾಲೂಕು ಪಂಚಾಯತ್ ನ ಸಹಾಯಕ ನಿರ್ದೇಶಕ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನೌಕರರ ಸಂಘ ದ ಅಧ್ಯಕ್ಷ ಮಂಜುನಾಥ್ ಶೆಟ್ಟಿ, ಹಕ್ಲಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರ ಬಿಲ್ಲವ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.