Tuesday, November 26, 2024
Tuesday, November 26, 2024

ನ.15-17 ರವರೆಗೆ ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ನ.15-17 ರವರೆಗೆ ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

Date:

ಉಡುಪಿ, ನ.14: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ನವೆಂಬರ್ 15 ರಿಂದ 17 ರವರೆಗೆ ಈ ಕೆಳಕಂಡ ಸ್ಥಳಗಳಲ್ಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್ ಏರಿಯಾ ಮತ್ತು ಇಂದ್ರಾಳಿ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾ, ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 15 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

110/33/11 ಕೆವಿ ನಿಟ್ಟೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಬನ್ನಂಜೆ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಜ್ಜರಕಾಡು, ಎಲ್.ಐ.ಸಿ, ಜೋಡುಕಟ್ಟೆ, ಟಿ.ಎಂ.ಎ ಪೈ ಆಸ್ಪತ್ರೆ, ಖಜಾನೆ, ತಾಲೂಕು ಪಂಚಾಯತ್, ಮಿಷನ್ ಕಂಪೌಂಡ್ 1ನೇ ಮುಖ್ಯ ರಸ್ತೆ, ಮಂಜುನಾಥ ಪೆಟ್ರೋಲ್ ಪಂಪ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕೊಕ್ಕರ್ಣೆ ಫೀಡರ್ ಮಾರ್ಗದಲ್ಲಿ ಹೆಚ್.ಟಿ/ಎಲ್.ಟಿ ಮಾರ್ಗ ಕಾಮಗಾರಿ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾಮಂದಿರ, ಕೆ.ಕೆ.ಪಾರ್ಮ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 16 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮೂಡುಬೆಳ್ಳೆ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನ.17 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!