Sunday, January 19, 2025
Sunday, January 19, 2025

ನ. 18: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನದ 6ನೇ ವರ್ಷದ ವಾರ್ಷಿಕೋತ್ಸವ

ನ. 18: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನದ 6ನೇ ವರ್ಷದ ವಾರ್ಷಿಕೋತ್ಸವ

Date:

ಉಡುಪಿ, ನ. 16: ಪರ್ಯಾಯ ಶ್ರೀ ಕೃಷ್ಣಾಪುರ ಮಠ ಉಡುಪಿ ಹಾಗೂ ಸೋದೆ ವಾದಿರಾಜ ಮಠ ಉಡುಪಿ ಇವರ ಆಶ್ರಯದಲ್ಲಿ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ತೆಂಕುತಿಟ್ಟು ಯಕ್ಷಗಾನ ಅಧ್ಯಯನ ಕೇಂದ್ರ ಇದರ 6ನೇ ವರ್ಷದ ವಾರ್ಷಿಕೋತ್ಸವವು ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನವೆಂಬರ್ 18 ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಜರುಗಲಿದೆ.

ಈ ಪ್ರಯುಕ್ತ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ಮಯ್ಯ ಸಿರಿಬಾಗಿಲು – ಪ್ರಸಿದ್ಧ ಭಾಗವತರು, ವಿಧ್ವಾನ್ ಕೆ ಚಂದ್ರಶೇಖರ ನಾವಡ- ನಿರ್ದೇಶಕರು, ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ ಮತ್ತು ಶಶಿಕಾಂತ್ ಭಟ್- ಯಕ್ಷಗಾನ ಪ್ರೋತ್ಸಾಹಕರು ಇವರು ಪಾಲ್ಗೊಳ್ಳಲಿದ್ದಾರೆ. ಯಕ್ಷಗುರು ರಾಕೇಶ್ ರೈ ಅಡ್ಕ ಮತ್ತು ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನದ ಸಂಯೋಜಕರಾದ ಗೋಪಿಕಾ ಮಯ್ಯ ಉಪಸ್ಥಿತರಿರುವರು.

ಯಕ್ಷಗುರು ರಾಕೇಶ್ ರೈ ಅಡ್ಕ ಇವರ ಶಿಷ್ಯಂದಿರಿಂದ ಮಧ್ಯಾಹ್ನ 3 ಗಂಟೆಯಿಂದ ‘ಏತದ್ಧಿ ರಾಮಾಯಣಂ’ ಯಕ್ಷಗಾನ ಪ್ರದರ್ಶನ ಇರುವುದು.

ಈ ಕಾರ್ಯಕ್ರಮಕ್ಕೆ ಎಲ್ಲಾ ಕಲಾಭಿಮಾನಿಗಳಿಗೆ ಆದರದ ಸ್ವಾಗತವನ್ನು ಪ್ರತಿಷ್ಠಾನದ ಸಂಯೋಜಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಬಯಸಿದ್ದಾರೆ. ಈ ಕಾರ್ಯಕ್ರಮವು ಮಲ್ಯಾಡಿ ಲೈವ್ ಯುಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ.

ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನವು 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತೆಂಕುತಿಟ್ಟು ಯಕ್ಷಗಾನ ತರಬೇತಿಯನ್ನು ಸಮರ್ಥ ಗುರು ರಾಕೇಶ್ ರೈ ಅಡ್ಕ ಇವರ ಮೂಲಕ ಉಚಿತವಾಗಿ ನೀಡುತ್ತಿದೆ. ಪ್ರತಿಷ್ಠಾನದ ಈ ಸತ್ಕಾರ್ಯಕ್ಕೆ ಸೋದೆ ಮಠದ ಶ್ರೀ ಶ್ರೀ ವಿಶ್ವವಲ್ಲಭ ಶ್ರೀಪಾದರು ತಮ್ಮ ಮಠದಲ್ಲಿ ಸ್ಥಳಾವಕಾಶವನ್ನು ಕಲ್ಪಿಸಿಕೊಟ್ಟು ಈ ಕಾರ್ಯವನ್ನು ಪೋಷಿಸುತ್ತಾ ಬಹುವಾಗಿ ಅನುಗ್ರಹಿಸುತ್ತಿದ್ದಾರೆ. ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪ್ರತಿಷ್ಠಾನದ ವತಿಯಿಂದ ಕೋರಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!