Home ಸುದ್ಧಿಗಳು ಪ್ರಾದೇಶಿಕ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ರಾಷ್ಟ್ರಮಟ್ಟದ ಬ್ಯಾಂಕೋ ಬ್ಲ್ಯೂ ರಿಬ್ಬನ್ 2023 ಪ್ರಶಸ್ತಿಯ ಗರಿ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ರಾಷ್ಟ್ರಮಟ್ಟದ ಬ್ಯಾಂಕೋ ಬ್ಲ್ಯೂ ರಿಬ್ಬನ್ 2023 ಪ್ರಶಸ್ತಿಯ ಗರಿ

202
0

ಉಡುಪಿ, ನ. 16: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ ಸರ್ವಾಂಗೀಣ ಬೆಳವಣಿಗೆಗಾಗಿ ಗೋವಾದಲ್ಲಿ ನಡೆದ ನ್ಯಾಷನಲ್ ಫೆಡರೇಶನ್ ಆಫ್ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಮತ್ತು ಕ್ರೆಡಿಟ್ ಸೊಸೈಟೀಸ್ ಲಿ. ವತಿಯಿಂದ ಬೆಸ್ಟ್ ಇನ್ವೆಸ್ಟ್ ಮೆಂಟ್ ಇನಿಷಿಯೇಟಿವ್ ಅವಾರ್ಡ್ ಹಾಗೂ ಮಹಾರಾಷ್ಟ್ರದ ಅವಿಸ್ ಪಬ್ಲಿಕೇಶನ್ ನೀಡುವ ಪ್ರತಿಷ್ಠಿತ ಬ್ಯಾಂಕೋ ಬ್ಲ್ಯೂ ರಿಬ್ಬನ್ 2023 ಪ್ರಶಸ್ತಿಯನ್ನು ಬ್ಯಾಂಕಿನ ಅತ್ಯುತ್ತಮ ಸಾಧನೆಗಾಗಿ ಮುಡಿಗೇರಿಸಿಕೊಂಡಿದೆ.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಈ ಸಾಧನೆಯನ್ನು ಗುರುತಿಸಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ನಡೆದ ಜಿಲ್ಲಾ ಸಹಕಾರಿ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಬ್ಯಾಂಕಿನ ವ್ಯವಸ್ಥಾಪನಾ ನಿರ್ದೇಶಕರಾದ ಜಗದೀಶ್ ಮೊಗವೀರ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ಆಧುನಿಕ ಬ್ಯಾಂಕಿಂಗ್ ಸೇವೆಗಳ ಮೂಲಕ ಗ್ರಾಹಕ ಸ್ನೇಹಿ ಸೇವೆಯ ಮೂಲಕ ಬ್ಯಾಂಕ್ ನಿರಂತರ ಪ್ರಗತಿ ಸಾಧಿಸುತ್ತಿದ್ದು, ಪ್ರಸ್ತುತ ಗ್ರಾಹಕರ ಅನುಕೂಲತೆಗಾಗಿ ಬ್ಯಾಂಕಿನ ವ್ಯವಹಾರ ಕ್ಷೇತ್ರವನ್ನು ಬೆಂಗಳೂರು ಸಹಿತ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. ಬ್ಯಾಂಕಿನ ಈ ಸಾಧನೆಗೆ ಕೈಜೋಡಿಸಿದ ಗ್ರಾಹಕರಿಗೆ ಹಾಗೂ ಸದಸ್ಯರಿಗೆ ಅಧ್ಯಕ್ಷನ ನೆಲೆಯಲ್ಲಿ ಧನ್ಯವಾದ ಸಲ್ಲಿಸುವುದಾಗಿ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.