Monday, February 24, 2025
Monday, February 24, 2025

ಉಡುಪಿ ಜಿಲ್ಲೆಯ 1112 ಮತಗಟ್ಟೆಗಳಲ್ಲಿ ಪರಿಷ್ಕರಣೆಗೆ ಅವಕಾಶ

ಉಡುಪಿ ಜಿಲ್ಲೆಯ 1112 ಮತಗಟ್ಟೆಗಳಲ್ಲಿ ಪರಿಷ್ಕರಣೆಗೆ ಅವಕಾಶ

Date:

ಉಡುಪಿ, ನ. 17: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ಕ್ಕೆ ಸಂಬಂಧಿಸಿದಂತೆ, ನವೆಂಬರ್ 18 ಮತ್ತು 19 ಹಾಗೂ ಡಿಸೆಂಬರ್ 2 ಮತ್ತು 3 ರಂದು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅಂಗವಾಗಿ ವಿಶೇಷ ಆಂದೋಲನಾ ಆಯೋಜಿಸುವಂತೆ ಚುನಾವಣಾ ಆಯೋಗವು ನಿರ್ದೇಶಿಸಿರುತ್ತದೆ.

ಈ ಹಿನ್ನೆಲೆಯಲ್ಲಿ, ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 1112 ಮತಗಟ್ಟೆಗಳಲ್ಲಿ ನವೆಂಬರ್ 18 ಮತ್ತು 19 ಹಾಗೂ ಡಿಸೆಂಬರ್ 2 ಮತ್ತು 3 ರಂದು ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳ ಮೇಲ್ವಿಚಾರಕರುಗಳು ಮತಗಟ್ಟೆಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಉಪಸ್ಥಿತರಿರಲಿದ್ದು, ಮತದಾರರು ಅವರ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು ಪರಿಶೀಲಿಸಬಹುದು.

ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ನಮೂನೆ-6 ನ್ನು ಸಲ್ಲಿಸಬಹುದು. ವಲಸೆ, ಮರಣ ಹೊಂದಿದ್ದಲ್ಲಿ ಅಂತಹ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯಲು ನಮೂನೆ-7 ಹಾಗೂ ಮತದಾರರ ಪಟ್ಟಿಯಲ್ಲಿ ಯಾವುದಾದರೂ ತಿದ್ದುಪಡಿಗಳು ಇದ್ದಲ್ಲಿ ನಮೂನೆ-8 ನ್ನು ಸಂಬಂಧಪಟ್ಟಂತಹ ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿದೆ. ಆದ್ದರಿಂದ ಮೇಲೆ ತಿಳಿಸಲಾದ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಮತದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!