ಉಡುಪಿ: ದ.ರಾ. ಬೇಂದ್ರೆಯವರದು ದಾರ್ಶನಿಕ ಪ್ರತಿಭೆ. ಎಲ್ಲಾ ರೀತಿಯ ಸಾಮಾಜಿಕ ವಿಚಾರಗಳನ್ನು ಅವರ ಕಾವ್ಯದಲ್ಲಿ ಅಭಿವ್ಯಕ್ತವಾಗಿದೆ. ಜಾನಪದ ಸೊಗಡು ಮತ್ತು ಆಧುನಿಕತೆಯ ಸ್ಪರ್ಶ ಎರಡನ್ನೂ ಅವರ ಕಾವ್ಯದಲ್ಲಿ ಗುರುತಿಸಬಹುದು. ಅವರೊಬ್ಬ ಕನ್ನಡದ ಅದ್ಭುತ ಕಾವ್ಯ ಪ್ರತಿಭೆ ಎಂದು ಚಿಂತಕ ಡಾ. ಹೆಚ್.ಕೆ. ವೆಂಕಟೇಶ್ ಹೇಳಿದರು.
ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಕನ್ನಡ ವಿಭಾಗ ಆಶ್ರಯದಲ್ಲಿ ನಡೆದ ಬೇಂದ್ರೆ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಬೇಂದ್ರೆಯವರ ಬಹುಮುಖ ವ್ಯಕ್ತಿತ್ವವನ್ನು ಪರಿಚಯಿಸಿದರು. ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ಜಯಪ್ರಕಾಶ್ ಶೆಟ್ಟಿಯವರು ಪ್ರಸ್ತಾವಿಕವಾಗಿ ಮಾತನಾಡಿ ಬೇಂದ್ರೆಯವರ ಬಹುಕು ಬರಹಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುತ್ತದೆ ಎಂದರು.
ಕನ್ನಡ ವಿಭಾಗ ಅಧ್ಯಾಪಕರಾದ ಪ್ರೊ. ರಾಧಾಕೃಷ್ಣ, ರತ್ನಮಾಲಾ, ಶಾಲಿನಿ, ಅರ್ಚನಾ, ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಉಪಸ್ಥಿತರಿದ್ದರು. ಕನ್ನಡ ವಿಭಾಗದ ನಿಖೀಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬೇಂದ್ರೆ ಬದುಕು- ಬರಹದ ಬಗ್ಗೆ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.