ಶಿರ್ವ, ನ.20: ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜು ಶಿರ್ವ, ಇಲ್ಲಿನ ಇತಿಹಾಸ ಮತ್ತು ಪುರಾತತ್ವ ವಿಭಾಗದ ವತಿಯಿಂದ ಸುಸ್ಥಿರ ಪಾರಂಪರಿಕ ಪ್ರವಾಸೋದ್ಯಮ ಕಾರ್ಯಗಾರ ಸೋಮವಾರ ನಡೆಯಿತು. ಸಮಾಜಕಾರ್ಯ ಉಪನ್ಯಾಸಕ ಗಣೇಶ್ ಪ್ರಸಾದ್ ಜಿ. ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಸಂಶೋಧನೆಯ ಹಸಿವು ವಿದ್ಯಾರ್ಥಿಯ ಬೆಳವಣಿಗೆಗೆ ಇಂಧನ. ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪುರಾತತ್ವ ವಿದ್ಯಾರ್ಥಿಗಳು ನಡೆಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
ಪ್ರಾಂಶುಪಾಲೆ ನಯನ ಎಂ ಪಕ್ಕಳ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಉಪನ್ಯಾಸಕ ಶ್ರುತೇಶ್ ಆಚಾರ್ಯ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ಶ್ರಾವ್ಯ ಆರ್ ವಂದಿಸಿ, ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳು ಸಂವಾದ ನಡೆಸಿದರು.