ಉಡುಪಿ, ನ.22: ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರನ್ನು ಪೂರೈಕೆ ಮಾಡುತ್ತಿರುವ ಬಜೆ ಡ್ಯಾಂನಲ್ಲಿ ಬೇಸಿಗೆ ಆರಂಭವಾದ ಹಿನ್ನೆಲೆ, ನೀರಿನ ಶೇಖರಣಾ ಮಟ್ಟ ಕುಸಿಯುವ ಸಂಭವ ಇದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರನ್ನು ಸಾಕಷ್ಟು ಪ್ರಮಾಣದಲ್ಲಿ ಪೂರೈಕೆ ಮಾಡಬೇಕಾಗಿರುವುದರಿಂದ ನಳ್ಳಿ ನೀರಿನ ಸಂಪರ್ಕ ಹಾಗೂ ಕೊಳವೆ ಬಾವಿ ಕೊರೆಯುವ ಬಗ್ಗೆ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಗರಸಭಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ: ನಳ್ಳಿ ನೀರಿನ ಸಂಪರ್ಕ ಹಾಗೂ ಕೊಳವೆ ಬಾವಿ ಕೊರೆಯುವ ಬಗ್ಗೆ ಅರ್ಜಿ ಆಹ್ವಾನ

ಉಡುಪಿ: ನಳ್ಳಿ ನೀರಿನ ಸಂಪರ್ಕ ಹಾಗೂ ಕೊಳವೆ ಬಾವಿ ಕೊರೆಯುವ ಬಗ್ಗೆ ಅರ್ಜಿ ಆಹ್ವಾನ
Date: