Tuesday, September 1, 2026
Tuesday, September 1, 2026

ಸಿಎಸ್‌ಸಿ ಕೇಂದ್ರದ ಮೂಲಕ ಜನಸೇವೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ: ಜ್ಯೋತಿ ಉದಯ್ ಪೂಜಾರಿ

ಸಿಎಸ್‌ಸಿ ಕೇಂದ್ರದ ಮೂಲಕ ಜನಸೇವೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ: ಜ್ಯೋತಿ ಉದಯ್ ಪೂಜಾರಿ

Date:

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ತಾಲ್ಲೂಕಿನ ಪಾಂಡೇಶ್ವರ ವಲಯ, ಕೋಡಿ, ಕಾವಡಿ, ಕಾರ್ಕಡ ಕಾರ್ಯಕ್ಷೇತ್ರದ ಸಿಎಸ್‌ಸಿ ಕೇಂದ್ರಗಳ ಉದ್ಘಾಟನೆಯನ್ನು ಬ್ರಹ್ಮಾವರದ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಪೂಜ್ಯ ಖಾವಂದರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನಪರ ಸೇವೆ ನಡೆಯುತ್ತಿದೆ. ಅದರೊಂದಿಗೆ ಸರಕಾರದ ಎಲ್ಲಾ ಕಾರ್ಯಕ್ರಮವನ್ನು ಗ್ರಾಮದ ಎಲ್ಲಾ ಜನರಿಗೆ ತಲುಪಿಸುವ ಉದ್ದೇಶದಿಂದ ಸಿಎಸ್‌ಸಿ ಕೇಂದ್ರದ ಮೂಲಕ ಜನಸಾಮಾನ್ಯರಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದ್ದಾರೆ ಎಂದರು.

ಧ.ಗ್ರಾ.ಯೋಜನಾಧಿಕಾರಿ ದಿನೇಶ್ ಶೇರಿಗಾರ್ ಮಾತನಾಡಿ, ಸಿಎಸ್‌ಸಿ ಕೇಂದ್ರ ಫಲಾನುಭವಿಗಳಿಗೆ ಸರಕಾರದ ವಿವಿಧ ಸೌಲಭ್ಯಗಳನ್ನು ಒದಗಿಸಲು ಸಹಾಕಾರಿಯಾಗಿದೆ ಎಂದರು. ಪಾಂಡೇಶ್ವರ ರಕ್ತೇಶ್ವರಿ ದೇವಸ್ಥಾನದ ಧರ್ಮದರ್ಶಿ ರಮೇಶ್ ರಾವ್, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಪ್ರತಾಪ್ ಶೆಟ್ಟಿ, ಸಾಲಿಗ್ರಾಮ ಪಟ್ಟಣ ಪಂಚಾಯತ ಅಧ್ಯಕ್ಷ ಸುಲತಾ ಹೆಗ್ಡೆ, ಹಾಗೂ ವಲಯದ ಎಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು ಸದಸ್ಯರು ವಲಯ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಪಾಂಡೇಶ್ವರ ವಲಯದ ಮೇಲ್ವಿಚಾರಕ ನಾಗೇಂದ್ರ ಎಸ್ ಸ್ವಾಗತಿಸಿ ನಿರೂಪಿಸಿದರು. ಕಾವಡಿ ಸೇವಾ ಪ್ರತಿನಿಧಿ ರಮೇಶ್ ರಾವ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, "ಗಮ್ಮತ್ " ನಮ್ ಮಣ್ಣೂ ಭಾಷಿ...

ಸ್ನೇಹಾ ಎನ್ ಮೇಸ್ತ ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.1: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು...

ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ

ಮಂಗಳೂರು, ಆ. 31: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ–...

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕಾಪು, ಆ.31: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ದೈಹಿಕ...
error: Content is protected !!