Wednesday, January 22, 2025
Wednesday, January 22, 2025

ಜನನ-ಮರಣವನ್ನು ಕಡ್ಡಾಯವಾಗಿ ಸಕ್ಷಮ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಿ: ಅಪರ ಜಿಲ್ಲಾಧಿಕಾರಿ

ಜನನ-ಮರಣವನ್ನು ಕಡ್ಡಾಯವಾಗಿ ಸಕ್ಷಮ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಿ: ಅಪರ ಜಿಲ್ಲಾಧಿಕಾರಿ

Date:

ಉಡುಪಿ, ನ.23: ಪ್ರತಿಯೊಬ್ಬರೂ ಜನನ ಮರಣ ನೋಂದಣಿಯನ್ನು ಸಕ್ಷಮ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ-ಮರಣ ಪ್ರಮಾಣ ಪತ್ರವು ಮಾನವನ ಪ್ರತಿಯೊಂದು ವಿಶೇಷ ಹಂತಗಳಲ್ಲಿ ಅತ್ಯವಶ್ಯವಾಗಿದೆ. ಜನನ-ಮರಣ ಮತ್ತು ನಿರ್ಜೀವ ಜನನಗಳನ್ನು ನೋಂದಾಯಿಸುವುದು ಕಡ್ಡಾಯವಾಗಿದ್ದು, 20 ದಿನಗಳ ಒಳಗಾಗಿ ಯಾವುದೇ ಶುಲ್ಕವಿಲ್ಲದೇ ನೋಂದಾಯಿಸಬಹುದಾಗಿದೆ. 21 ದಿನದ ನಂತರ 30 ದಿನದ ವರೆಗೆ 1 ರೂ. ದಂಡ, 30 ದಿನದಿಂದ 1 ವರ್ಷದ ವರೆಗೆ 5 ರೂ. ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಮಗು ಜನನವನ್ನು ಹೆಸರಿಲ್ಲದೇ ನೋಂದಣಿ ಮಾಡಲು ಅವಕಾಶವಿದ್ದು, ಈ ರೀತಿ ನೋಂದಾಯಿಸಿದ್ದಲ್ಲಿ 12 ತಿಂಗಳ ಒಳಗಾಗಿ ಮಗುವಿನ ಹೆಸರನ್ನು ಜನನ ಪುಸ್ತಕದಲ್ಲಿ ಯಾವುದೇ ಶುಲ್ಕವಿಲ್ಲದೇ ನೋಂದಣಿ ಮಾಡಲು ಅವಕಾಶವಿದೆ. ನಂತರದ 15 ವರ್ಷದ ಒಳಗಾಗಿ ವಿದಾಯಕ ತಡ ಶುಲ್ಕವನ್ನು ಪಾವತಿಸಿ, ಹೆಸರನ್ನು ನೋಂದಾಯಿಸಬಹುದಾಗಿದೆ ಎಂದರು. ಜನನ-ಮರಣ ನೋಂದಣಿ ದಾಖಲಾತಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗೆ ಅವಕಾಶವಿಲ್ಲ. ಆದರೆ ಕೆಲವೊಂದು ನಿರ್ದಿಷ್ಟ ಸಂದರ್ಭದಲ್ಲಿ ಮಾತ್ರ ತಿದ್ದುಪಡಿಗೆ ಅವಕಾಶವಿದ್ದು, ಅಂತಹ ತಿದ್ದುಪಡಿಗೆ ದುರುದ್ದೇಶ ಹೊಂದರಬಾರದು ಎಂದರು. ವಿದೇಶಗಳಲ್ಲಿ ಜನಿಸಿದ ಮಗುವಿನ ಜನನವನ್ನು ವಿದೇಶದ ಭಾರತೀಯ ರಾಯಭಾರಿ ಕಚೇರಿಯಲ್ಲಿ ನೋಂದಾವಣಿ ಮಾಡಿಸಲು ಅವಕಾಶವಿದೆ. ಆದರೆ ಶಿಶುವಿನ ತಂದೆ ತಾಯಿಯರು ಭಾರತ ದೇಶದಲ್ಲಿ ನೆಲೆಸುವ ಉದ್ದೇಶದಿಂದ ಭಾರತಕ್ಕೆ ಹಿಂದಿರುಗುದ್ದಲ್ಲಿ, ಹಿಂದಿರುಗಿದ 60 ದಿನಗಳ ಒಳಗಾಗಿ ಶಿಶುವಿನ ಜನನವನ್ನು ನೋಂದಾವಣೆ ಮಾಡಿಸಬೇಕು ಎಂದರು.

ಜನನ-ಮರಣ ಸಕ್ಷಮ ಪ್ರಾಧಿಕಾರದವಾದ ಎಲ್ಲಾ ಸ್ಥಳೀಯ ಸಂಸ್ಥೆಗಳು ಸರ್ಕಾರಿ ಆಸ್ಪತ್ರೆಗಳು, ಇ- ಜನ್ಮ ತಂತ್ರಾಂಶದ ಮೂಲಕ ನೋಂದಣಿ ಮಾಡುವ ಕಾರ್ಯವನ್ನು ಕಡ್ಡಾಯವಾಗಿ ಮಾಡುವುದರೊಂದಿಗೆ ಶೇ. 100 ರಷ್ಟು ಪ್ರಗತಿ ಸಾಧಿಸಬೇಕು ಎಂದ ಅವರು, ಜನನ-ಮರಣ ಪ್ರಮಾಣ ಪತ್ರ ಕೋರಿ ಅರ್ಜಿ ಸಲ್ಲಿಸಿದಾಗ ವಿಳಂಬವಿಲ್ಲದೇ ಕಾಲಮಿತಿಯೊಳಗೆ ಪ್ರಮಾಣಪತ್ರ ವಿತರಿಸಬೇಕೆಂದು ಸೂಚನೆ ನೀಡಿದರು. ಪ್ರಸ್ತುತ ಸಾಲಿನಲ್ಲಿ ಈವರೆಗೆ 1075 ಗ್ರಾಮಾಂತರದಲ್ಲಿ, 10,233 ನಗರ ಪ್ರದೇಶದಲ್ಲಿ ಸೇರಿದಂತೆ ಒಟ್ಟು 11,308 ಜನನ ನೋಂದಣಿಯಾಗಿದೆ. 5897 ಗ್ರಾಮಾಂತರದಲ್ಲಿ 4105, ಪಟ್ಟಣ ಪ್ರದೇಶದಲ್ಲಿ ಒಟ್ಟು 10,112 ಮರಣ ಪ್ರಕರಣಗಳು ನೋಂದಣಿಯಾಗಿವೆ. 67 ನಿರ್ಜಿವ ನೋಂದಣಿಯಾಗಿದೆ. ಲಿಂಗಾನುಪಾತ 958 ಇದ್ದು, ಮರಣ ಪ್ರಮಾಣವು ಶೇ. 7.94 ಇರುತ್ತದೆ ಎಂದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎಮ್.ವಿ ದೊಡ್ಡಮನಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!