ಬ್ರಹ್ಮಾವರ, ನ.27: ಕಾಲೇಜು ಫೆಸ್ಟ್ ಎಂಬುದು ವಿದ್ಯಾರ್ಥಿಗಳಿಗೆ ಆಕರ್ಷಕ ಕಾರ್ಯಚಟುವಟಿಕೆ, ಮನೋರಂಜನಾ ಕಾರ್ಯಕ್ರಮ ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಹೊರತರುವ ಅವಕಾಶ ಒದಗಿಸುತ್ತದೆ. ಇಂತಹ ಉತ್ತಮ ದೃಷ್ಟಿಕೋನ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಬಿ.ಸಿ.ಎ, ಬಿ.ಬಿ.ಎ, ಬಿ.ಕಾಂ, ಹೋಟೆಲ್ ಮ್ಯಾನೇಜ್ಮೆಂಟ್, ಫ್ಯಾಷನ್ ಡಿಸೈನ್, ಫುಡ್ ಟೆಕ್ನಾಲಜಿ ಎಲ್ಲಾ ವಿಭಾಗದ ವತಿಯಿಂದ ವಿದ್ಯಾವೈಭವ ಎಂಬ ಫೆಸ್ಟ್ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಎಲ್ಲಾ ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ವೈವಿಧ್ಯಮಯ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಫ್ಯಾಶನ್ ಡಿಸೈನ್ ವಿದ್ಯಾರ್ಥಿಗಳು ರಚಿಸಿದ ವಿವಿಧ ವಸ್ತುಗಳ ವಸ್ತು ಪ್ರದರ್ಶನ, ಹಾಗೂ ಸ್ವತಃ ವಿದ್ಯಾರ್ಥಿಗಳೇ ತಯಾರಿಸಿದ ಆಹಾರ ಉತ್ಪನ್ನಗಳ ಮಾರಾಟ, ಎವಿಯೇಷನ್ ವಿದ್ಯಾರ್ಥಿಗಳಿಂದ ವಿವಿಧ ಮಾದರಿ ತಯಾರಿಕೆಯ ವಸ್ತು ಪ್ರದರ್ಶನ ನಡೆಯಿತು.
ಮುಖ್ಯ ಅತಿಥಿಯಾಗಿ ಶಂಕರನಾರಾಯಣ ದೇವಸ್ಥಾನ ಕೊಡವೂರು ಇಲ್ಲಿಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಹಾಗೂ ಯಶಸ್ಸಿ ಫಿಶ್ ಮಿಲ್ ಮತ್ತು ಆಯಿಲ್ ಕಂಪನಿಯ ಮಾಲಕರಾದ ಸಾಧು ಸಾಲಿಯಾನ್, ಎಲ್ ಅಂಡ್ ಡಿ ನೀವಿಯಸ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಮ್ಯಾನೇಜರ್ ಅಸ್ಮಿತಾ, ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ, ನಿರ್ದೇಶಕಿ ಮಮತಾ, ಕಾಲೇಜಿನ ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್, ಪ್ರಭಾಕರ ತಿಂಗಳಾಯ ಹಾಗೂ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಅನ್ಸೀಟಾ ಸ್ವಾಗತಿಸಿ, ಉಪನ್ಯಾಸಕ ಗ್ಲಾನೆಲ್ ವಂದಿಸಿ, ಉಪನ್ಯಾಸಕಿ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.