Monday, November 25, 2024
Monday, November 25, 2024

ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ: ಜಿಲ್ಲಾಧಿಕಾರಿ

ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ: ಜಿಲ್ಲಾಧಿಕಾರಿ

Date:

ಉಡುಪಿ, ನ.29: ಕ್ರೀಡೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ. ಕ್ರೀಡೆಯನ್ನು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಿದಾಗ ಮಾತ್ರ ಸೋಲು-ಗೆಲುವನ್ನು ಸಮಾನವಾಗಿ ಕಾಣಬಹುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಪೊಲೀಸ್ ಇಲಾಖೆ ಉಡುಪಿ ವತಿಯಿಂದ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಪ್ರತಿನಿತ್ಯ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಒಂದು ದಿನವನ್ನು ಕ್ರೀಡಾ ಚಟುವಟಿಕೆಗಾಗಿ ಮೀಸಲಿಡುವುದರಿಂದ ಅವರ ಮನೋಲ್ಲಾಸ ಹೆಚ್ಚುವುದರೊಂದಿಗೆ ಮುಕ್ತವಾಗಿ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಕೆಲಸದ ಒತ್ತಡವನ್ನು ಮರೆಸುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯವಾಗಿದ್ದು, ಸೋಲು-ಗೆಲುವನ್ನು ಲೆಕ್ಕಿಸದೇ ಕ್ರೀಡಾ ಮನೋಭಾವದಿಂದ ಪ್ರತಿಯೊಬ್ಬರೂ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಹೊಂದಾಣಿಕೆ ಮನೋಭಾವ ಬರುತ್ತದೆ. ಪ್ರಾಣಾಯಾಮವನ್ನು ಕೂಡ ಕ್ರೀಡೆಯಾಗಿ ಪರಿಗಣಿಸಬಹುದಾಗಿದೆ. ಪ್ರತಿನಿತ್ಯ ಅತ್ಯಂತ ಕ್ರಿಯಾಶೀಲರಾಗಿ ಕರ್ತವ್ಯನಿರ್ವಹಿಸಲು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ವಿವಿಧ ತಂಡದ ಪಥ ಸಂಚಲನೆ ನಡೆಯಿತು ಹಾಗೂ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಲಾಯಿತು. ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಸ್ವಾಗತಿಸಿ, ಎಎಸ್‌ಪಿ ಎಸ್.ಟಿ ಸಿದ್ದಲಿಂಗಪ್ಪ ವಂದಿಸಿದರು. ಯೋಗೇಶ ನಾಯ್ಕ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!