Tuesday, September 17, 2024
Tuesday, September 17, 2024

ಕ್ರೀಡೆ ಕಲಿಕೆಗೆ ಪೂರಕ: ಮನೀಶ್ ಲಕ್ಷ್ಮಣ್

ಕ್ರೀಡೆ ಕಲಿಕೆಗೆ ಪೂರಕ: ಮನೀಶ್ ಲಕ್ಷ್ಮಣ್

Date:

ಕಟಪಾಡಿ, ನ.29: ಕಟಪಾಡಿಯ ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಥಮ ವರ್ಷದ ಕ್ರೀಡಾಕೂಟ ಎಸ್.ವಿ.ಎಸ್ ಕ್ರೀಡಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಷ್ಟೀಯ ಕ್ರೀಡಾಪಟು ಮನೀಶ್ ಲಕ್ಷ್ಮಣ್ ಮಾತನಾಡುತ್ತಾ, ಕ್ರೀಡೆ ಕಲಿಕೆಗೆ ಪೂರಕವೇ ಹೊರತು ಮಾರಕವಲ್ಲ, ಸ್ವಾಸ್ಥ್ಯ ಆರೋಗ್ಯಕ್ಕೆ ಕ್ರೀಡೆ ಅತಿ ಮುಖ್ಯ ಎಂದರು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಲೇಜಿನ ವಿದ್ಯಾರ್ಥಿ ಗಗನ್ ಜಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಿದ್ಧಾಂತ್ ಫೌಂಡೇಶನ್ ನ ಟ್ರಸ್ಟಿ ನಮಿತಾ ಜಿ ಭಟ್, ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಂತ್ ಪೈ ಉಪಸ್ಥಿತರಿದ್ದರು. ಉಪನ್ಯಾಸಕರಾದ ವರ್ಷ ಪ್ರಭು ಮತ್ತು ಚಂದನ್ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಕಾರ್ಯದರ್ಶಿ ಆಲ್ಡ್ರಿನ್ ಮಾರ್ಟಿಸ್ ಹಾಗೂ ಕ್ರೀಡಾ ನಿರ್ದೇಶಕ ಶಶಿಕಿರಣ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!